Friday, July 3, 2026
Friday, July 3, 2026

ಬಾರಕೂರು: ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಅಂಕುರ’ ಓರಿಯಂಟೇಶನ್ ಕಾರ್ಯಕ್ರಮ

ಬಾರಕೂರು: ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜಿನಲ್ಲಿ ‘ಅಂಕುರ’ ಓರಿಯಂಟೇಶನ್ ಕಾರ್ಯಕ್ರಮ

Date:

ಬಾರಕೂರು, ಜೂ.10: ಸುಜ್ಞಾನ್ ನ್ಯಾಷನಲ್ ಪಿಯು ಕಾಲೇಜು ಬಾರಕೂರಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸಂಸ್ಥೆಯ ವಾತಾವರಣ, ನಿಯಮಗಳು, ಶಿಕ್ಷಣದ ವಿಧಾನ ಮತ್ತು ಸೌಲಭ್ಯಗಳ ಬಗ್ಗೆ ಪರಿಚಯ ಮಾಡಿಕೊಡುವ ‘ಅಂಕುರ’ – ಹೊಸ ಆರಂಭ ಮತ್ತು ಆನಂತ ಸಾಧ್ಯತೆಗಳು ಎನ್ನುವ ಓರಿಯಂಟೇಶನ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ “ಸರಸ್ವತಿ ವಂದನೆ” ಮೂಲಕ ಆರಂಭಗೊಂಡಿತು.

ಅಧ್ಯಕ್ಷತೆಯನ್ನು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷರಾಗಿರುವ ಡಾ. ರಮೇಶ್ ಶೆಟ್ಟಿ ವಹಿಸಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಭರವಸೆಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು.

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಲ್ಲಿ ಶಿಸ್ತು, ಅತಿ ಮುಖ್ಯ. ನಿರಂತರ ಅಭ್ಯಾಸ, ಪ್ರಾಮಾಣಿಕ ಪ್ರಯತ್ನ ಮತ್ತು ನಿರ್ದಿಷ್ಟ ಗುರಿ ಇದ್ದರೆ ಮಾತ್ರ ಉತ್ತಮ ಫಲಿತಾಂಶ ಸಿಗಲು ಸಾಧ್ಯವೆಂದು ಹೇಳುತ್ತಾ ಕಾರ್ಯಕ್ರಮದ ಶೀರ್ಷಿಕೆ ” ಅಂಕುರ” ದ ಬಗ್ಗೆ ಮಾತನಾಡಿ ಬೀಜ ಮೊಳಕೆಯೊಡೆದು ಚಿಗುರೊಡೆಯುವಂತೆ ವಿದ್ಯಾರ್ಥಿಗಳಲ್ಲಿ ಸುಜ್ಞಾನದ ಮೊಳಕೆ ಚಿಗುರೊಡೆಯಲಿ ಎಂದು ಹಾರೈಸಿದರು.

ಸುಜ್ಞಾನ ನ್ಯಾಷನಲ್ ಪಿಯು ಕಾಲೇಜ್ ಬಾರಕೂರಿನ ಪ್ರಾಂಶುಪಾಲರಾದ ಪ್ರಕಾಶ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದು ಶೈಕ್ಷಣಿಕ ಮಾಹಿತಿ, ಪರೀಕ್ಷಾ ವಿವರ ಮತ್ತು ಕಾಲೇಜಿನ ನಿಯಮಾವಳಿಗಳ ಜೊತೆಗೆ ವಿಧ್ಯಾರ್ಥಿಗಳ ಜವಾಬ್ದಾರಿ ಕುರಿತು ಸಂಕ್ಷಿಪ್ತವಾಗಿ ವಿವರಿಸಿ ಉಪನ್ಯಾಸಕರ ಪರಿಚಯವನ್ನು ಮಾಡಿ ವಿದ್ಯಾರ್ಥಿಗಳಿಗೆ ಶುಭವ ಹಾರೈಸಿದರು. ನಂತರ ‘ಅಂಕುರ’ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ರಾಸ್ ಲ್ಯಾಂಡ್ ಕಾಲೇಜು ಬ್ರಹ್ಮಾವರ ಇದರ ಪ್ರಾಂಶುಪಾಲರಾದ ರಾಬರ್ಟ್ ಕ್ಲೈವ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ದಾರಿ ತಪ್ಪಲು ಕಾರಣವೇನು? ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರ ಪಾತ್ರ ಎಷ್ಟು ಮುಖ್ಯ? ಎನ್ನುವ ವಿಷಯದ ಬಗ್ಗೆ ಉಪನ್ಯಾಸವನ್ನು ನೀಡಿದರು.

ಉಪನ್ಯಾಸಕಿ ಸೌಮ್ಯ ಸ್ವಾಗತಿಸಿ, ರಜನಿ ವಂದಿಸಿದರು. ಉಪನ್ಯಾಸಕಿ ನೈನಾ ಜೆ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ...

ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

ಉಡುಪಿ, ಜು.2: ಕಲ್ಯಾಣ ಕ್ರಾಂತಿಯ ನಂತರ ನಶಿಸಿಹೋಗುತ್ತಿದ್ದ ಬಸವಣ್ಣ, ಅಲ್ಲಮಪ್ರಭು ಅಕ್ಕಮಹಾದೇವಿ...

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ...
error: Content is protected !!