Sunday, August 30, 2026
Sunday, August 30, 2026

ಜ್ಞಾನಸುಧಾ: ಮೌಲ್ಯಸುಧಾ-49; ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

ಜ್ಞಾನಸುಧಾ: ಮೌಲ್ಯಸುಧಾ-49; ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

Date:

ಗಣಿತನಗರ, ಜೂ.11: ಪ್ರತಿದಿನ ನಿಮಗೊಂದು ಹೊಸ ಅವಕಾಶ ಸಿಗುತ್ತದೆ. ಆ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ. ಕಷ್ಟಗಳು ನಮ್ಮನ್ನು ಬೆಳೆಸಿದಷ್ಟು, ಸುಖ ನಮ್ಮನ್ನು ಬೆಳೆಸುವುದಿಲ್ಲ. ನಮ್ಮ ಭಾವನೆಗಳನ್ನು ಹಂಚಿಕೊಳ್ಳಬೇಕು. ನಮ್ಮ ಬದುಕಿನ ಮಹಾದುದ್ದೇಶ ಎದುರಿಗೆ ಇದ್ದಾಗ ನಮಗೆ ಎದುರಾಗುವ ಸಮಸ್ಯೆಗಳು ನಗಣ್ಯ. ನಾವು ಕಲಿತಂತ ವಿದ್ಯೆ ಮನುಕುಲದ ಒಳಿತಿಗಾಗಿ ಬಳಕೆಯಾಗಬೇಕು. ನಾವು ನಮ್ಮ ಊರಿಗೆ ಒಳ್ಳೆಯ ಕೊಡುಗೆ ಆಗಬೇಕು. ನಾವು ನಿನ್ನೆ ಮತ್ತು ನಾಳೆಯ ಬಗ್ಗೆ ಹೆಚ್ಚೆಚ್ಚು ಯೋಚನೆ ಮಾಡಿ ತೊಂದರೆಗೊಳಗಾಗುತ್ತಿದ್ದೇವೆ. ಇವತ್ತಿನ ದಿನ ನಿಮ್ಮ ಕೈಯಲ್ಲಿದೆ ಎಂದು ಉಡುಪಿಯ ಮನಃಶಾಸ್ತ್ರಜ್ಞರು ಹಾಗೂ ಲೇಖಕರಾದಂತಹ ಡಾ. ವಿರೂಪಾಕ್ಷ ದೇವರಮನೆ ನುಡಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ನಡೆಯುತ್ತಿರುವ ಮೌಲ್ಯಸುಧಾ ಮಾಲಿಕೆ- 49ರಲ್ಲಿ “ಈ ದಿನ ನಿನದೇ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದಂತಹ ಡಾ. ಸುಧಾಕರ ಶೆಟ್ಟಿ, ಟ್ರಸ್ಟಿಗಳಾದಂತಹ ಅನಿಲ್ ಕುಮಾರ್ ಜೈನ್, ಸಿ.ಎ ನಿತ್ಯಾನಂದ ಪ್ರಭು, ಸಿ.ಇ.ಒ ಹಾಗೂ ಪ್ರಾಂಶುಪಾಲರು ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲರಾದ ಸಾಹಿತ್ಯ ಹಾಗೂ ಕೌನ್ಸಿಲರ್ ಡಾ. ಪ್ರಸನ್ನ ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕರುಗಳಾದ ಸಂತೋಷ್ ನೆಲ್ಲಿಕಾರು ಪ್ರಾರ್ಥಿಸಿ, ವಿನಯಚಂದ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!