Monday, October 19, 2026
Monday, October 19, 2026

ತ್ರಿಶಾ ವಿದ್ಯಾ ಪಿಯು ಕಾಲೇಜು: ಓರಿಯೆಂಟೇಷನ್ ಕಾರ್ಯಕ್ರಮ

ತ್ರಿಶಾ ವಿದ್ಯಾ ಪಿಯು ಕಾಲೇಜು: ಓರಿಯೆಂಟೇಷನ್ ಕಾರ್ಯಕ್ರಮ

Date:

ಉಡುಪಿ, ಜೂ.11: ಕಟಪಾಡಿಯ ತ್ರಿಶಾ ವಿದ್ಯಾ ಪಿ ಯು ಕಾಲೇಜಿನ ಪ್ರಥಮ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮವು ಕಟಪಾಡಿಯ ಎ ಆರ್ ಕಾಮತ್ ಮೆಮೋರಿಯಲ್ ಹಾಲ್ ನಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ ಗೋಪಾಲ ಕೃಷ್ಣ ಭಟ್ ಇವರು ವಿದ್ಯಾರ್ಥಿಗಳಿಗೆ ಕಲಿಕೆಯ ಹತ್ತು ಸೂತ್ರಗಳನ್ನು, ಮುಖ್ಯವಾಗಿ ಯೋಜನೆ ಮತ್ತು ಅಭ್ಯಾಸದ ಪ್ರಾಮುಖ್ಯತೆಯನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಕಾಲೇಜಿನ ನಿಯಮ ಮತ್ತು ನಿಬಂಧನೆಗಳನ್ನು ತಿಳಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕರಾದ ಪ್ರೊ. ಧೀರಜ್ ಬೆಳ್ಳಾರೆ ನಿರೂಪಿಸಿ,, ಇಂಗ್ಲೀಷ್ ಉಪನ್ಯಾಸಕಿಯಾದ ಪ್ರೊ. ನಿಧಿ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಪ್ರೊ. ಸರಿತಾ ಇವರು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!