Wednesday, September 23, 2026
Wednesday, September 23, 2026

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

‘ಯಶೋ ಮಾಧ್ಯಮ-2026’ ಪ್ರಶಸ್ತಿಗೆ ಸುಬ್ರಹ್ಮಣ್ಯ ಜಿ ಕುರ್ಯ ಆಯ್ಕೆ

Date:

ಉಡುಪಿ, ಜೂ.12: ರಾಜಾಜಿನಗರದ ಸ್ಪಂದನ ಸೇವಾ ಸಂಸ್ಥೆ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ ಒರ್ವ ಪತ್ರಕರ್ತರಿಗೆ ನೀಡುವ ‘ಯಶೋ ಮಾಧ್ಯಮ’ ಪ್ರಶಸ್ತಿಯನ್ನು ಈ ಬಾರಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಹಾಗೂ ವಿಜಯ ಕರ್ನಾಟಕ ಉಡುಪಿ ಜಿಲ್ಲಾ ವರದಿಗಾರರಾದ ಸುಬ್ರಹ್ಮಣ್ಯ .ಜಿ ಕುರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ ವಿ. ಪೈ ಹೇಳಿದರು. ಜೂನ್15 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ‘ಯಶೋ ಮಾಧ್ಯಮ-2026’ ಪ್ರಶಸ್ತಿಯನ್ನು ವಿತರಿಸಲಾಗುವುದು ಎಂದು ಹೇಳಿದರು.

ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪತ್ರಕರ್ತರಾದ ಜನಾರ್ದನ್ ಕೊಡವೂರು, ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಾಮರಾಯ ಕಿಣಿ, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಆಡಳಿತಾಧಿಕಾರಿ ಸುಬ್ರಹ್ಮಣ್ಯ ಕಾರಂತ್, ಉದ್ಯಾನವನ ವಿನ್ಯಾಸಗಾರರಾದ ಲೋಕೇಶ್ ಪೂಜಾರಿ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್ ಸಹಾಯಕ ಪ್ರಾಧ್ಯಾಪಕರಾದ ಡಾ.ಮರಿಯಾ ಪಾಯಸ್, ಸ್ಪಂದನಾ ಸೇವಾ ಸಂಸ್ಥೆಯ ಖಜಾಂಚಿ ರಜನಿ ವಿ.ಪೈ, ಕಾರ್ಯದರ್ಶಿ ಸಂತೋಷ್ ಕಾಮತ್ ಉಪಸ್ಥಿತರಿರುವರು. ಕಲ್ಯಾಣಪುರ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿಯವರಿಗೆ ಸ್ಪಂದನಾ ಸೇವಾ ಸಂಸ್ಥೆಯಿಂದ ಗೌರವಿಸಲಾಗುವುದು ಎಂದು ರಜನಿ ವಿ. ಪೈ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!