Sunday, October 18, 2026
Sunday, October 18, 2026

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮ ದಿನಾಚರಣೆ

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಜನ್ಮ ದಿನಾಚರಣೆ

Date:

ಉಡುಪಿ, ಜೂ.16: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿಯವರ ಜನ್ಮದಿನದ ಅಂಗವಾಗಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳು ಹಾಗೂ ಪೌಷ್ಟಿಕ ಆಹಾರ ಕಿಟ್ ಗಳ ವಿತರಣಾ ಕಾರ್ಯಕ್ರಮವು ಜೂನ್ 19 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಕಾಂಗ್ರೆಸ್ ಭವನದಲ್ಲಿ ಜರಗಲಿದೆ. ಈ ಬಗ್ಗೆ ಮಾಹಿತಿ ನೀಡಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು, ನಿರಂತರ ಜನರ ನೋವಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ಹೋರಾಡುವ, ಮಾನವೀಯ ಹೃದಯದ ನಾಯಕ ರಾಹುಲ್ ಗಾಂಧಿಯವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ 75 ಮಂದಿ ವಿಶೇಷ ಚೇತನರಿಗೆ ಸಹಾಯಕ ಸಾಧನಗಳಾದ ಶ್ರವಣ ಸಾಧನ, ಕಂಬೋಡ್ ವೀಲ್ ಚೇರ್, ವಾಟರ್ ಬೆಡ್, ವಾಕರ್, ವಾಕಿಂಗ್ ಸ್ಟಿಕ್, ಕ್ರಚ್ಸ್ ಹಾಗೂ ಪೌಷ್ಟಿಕ ಆಹಾರ ಕಿಟ್ ಗಳನ್ನು ನೀಡಲಾಗುವುದೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!