Sunday, October 18, 2026
Sunday, October 18, 2026

ಬೈಂದೂರನ್ನು ಪ್ರವಾಸೋದ್ಯಮದ ಕೇಂದ್ರಬಿಂದುವಾಗಿ ರೂಪಿಸುವುದು ನಮ್ಮ ಗುರಿ: ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ

ಬೈಂದೂರನ್ನು ಪ್ರವಾಸೋದ್ಯಮದ ಕೇಂದ್ರಬಿಂದುವಾಗಿ ರೂಪಿಸುವುದು ನಮ್ಮ ಗುರಿ: ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ

Date:

ಮಲ್ಪೆ, ಜೂ.16: ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯು ಪ್ರವಾಸೋದ್ಯಮ ಚಟುವಟಿಕೆಗೆ ಅತ್ಯಂತ ಪೂರಕವಾದ ವಾತಾವರಣವನ್ನು ಹೊಂದಿದೆ. ಇದನ್ನು ಜಿಲ್ಲೆಯ ಪ್ರವಾಸೋದ್ಯಮದ ಕೇಂದ್ರಬಿಂದುವಾಗಿ ರೂಪಿಸಿ, ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಆಚಾರ-ವಿಚಾರಗಳನ್ನು ದೇಶ-ವಿದೇಶಗಳಿಗೆ ಪರಿಚಯಿಸುವ ಮಹತ್ತರ ಉದ್ದೇಶವನ್ನು ಹೊಂದಲಾಗಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಶಾಸಕರ ದುಡ್ಮಿ ಯೋಜನೆಯ ಪರಿಕಲ್ಪನೆಯ ಜಂಟಿ ಆಶ್ರಯದಲ್ಲಿ ಮಲ್ಪೆಯ ಪ್ಯಾರಡೈಸ್ ಐಲ್ ಬೀಚ್ ರೆಸಾರ್ಟ್ ಹಮ್ಮಿಕೊಳ್ಳಲಾಗಿದ್ದ ಸಮುದಾಯ ಪ್ರವಾಸೋದ್ಯಮ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ಜೊತೆಗೆ, ಸ್ಥಳೀಯ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಮಹಿಳೆಯರಿಗೆ ಪ್ರವಾಸೋದ್ಯಮ ಕ್ಷೇತ್ರದ ಅಡಿಯಲ್ಲಿ ಶಾಶ್ವತ ಉದ್ಯೋಗಾವಕಾಶ ಹಾಗೂ ಆರ್ಥಿಕ ಸಬಲೀಕರಣ ಕಲ್ಪಿಸುವ ನಿಟ್ಟಿನಲ್ಲಿ ಈ ವಿಶೇಷ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ ಶಾಸಕರು, ಕಾರ್ಯಾಗಾರದಲ್ಲಿ ಭಾಗವಹಿಸಿದ ಎಲ್ಲಾ ಸಂಜೀವಿನಿ ಮಹಿಳೆಯರಿಗೆ ಶುಭ ಹಾರೈಸಿದರು.

ವಿವಿಧ ವಿಷಯಗಳ ಕುರಿತು ತರಬೇತಿ: ದಿನಪೂರ್ತಿ ನಡೆದ ಈ ಕಾರ್ಯಾಗಾರದಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ವಿವಿಧ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಪ್ರವಾಸೋದ್ಯಮದ ಪ್ರಸ್ತುತ ಅವಕಾಶಗಳು ಮತ್ತು ಇದರಲ್ಲಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ ಯಶಸ್ಸು ಗಳಿಸುವ ಕುರಿತು ಸವಿಸ್ತಾರವಾದ ತರಬೇತಿ ಹಾಗೂ ಮಾರ್ಗದರ್ಶನ ನೀಡಿದರು.

ಮಲ್ಪೆಯ ಪ್ಯಾರಡೈಸ್ ಐಲ್ ಬೀಚ್ ರೆಸಾರ್ಟ್ ಮುಖ್ಯಸ್ಥರಾದ ಪ್ರತಿಮಾ ಮನೋಹರ್, ಪ್ರವಾಸೋದ್ಯಮ ಇಲಾಖೆಯ ಭವಿಷ್, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕರಾದ ಅವಿನಾಶ್, ತಾಲೂಕು ವ್ಯವಸ್ಥಾಪಕರಾದ ಪ್ರಶಾಂತ್ ಹಾಗೂ ವಲಯ ಮೇಲ್ವಿಚಾರಕರಾದ ಮಹೇಂದ್ರ ಉಪಸ್ಥಿತರಿದ್ದರು.

ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮ ಪಂಚಾಯತ್‌ಗಳ ಸಂಜೀವಿನಿ ಒಕ್ಕೂಟಗಳಿಂದ ಒಟ್ಟು 60ಕ್ಕೂ ಹೆಚ್ಚು ಸಂಜೀವಿನಿ ಮಹಿಳೆಯರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!