Sunday, October 18, 2026
Sunday, October 18, 2026

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

Date:

ಉಡುಪಿ, ಜೂ.16: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘ ಹಾಗೂ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ರಸಾಯನಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ನಡೆಯಿತು. ಕಳೆದ ಶೈಕ್ಷಣಿಕ ವರ್ಷದಲ್ಲಿ ಪ್ರಶ್ನೆ ಪತ್ರಿಕೆ ನೀಲ ನಕಾಶೆ ಹಾಗೂ ಮಾದರಿ ಪ್ರಶ್ನೆ ಪತ್ರಿಕೆ ರಚನಾ ಸಮಿತಿಯ ಸದಸ್ಯರಾಗಿದ್ದ ಗಿರೀಶ ಸಿ., ಅಸಿಸ್ಟೆಂಟ್ ಡೈರೆಕ್ಟರ್ ಕಂಪ್ಯೂಟರ್ ಸೆಲ್, ಕೆ ಎಸ್ ಇ.ಎ.ಬಿ ಬೆಂಗಳೂರು ಇವರು ಸಂಪನ್ಮೂಲ ವ್ಯಕ್ತಿಯಾಗಿದ್ದರು. ವಿವಿಧ ಖಾಸಗಿ ಪದವಿಪೂರ್ವ ಕಾಲೇಜುಗಳ ಸುಮಾರು ೪೫ ರಸಾಯನಶಾಸ್ತ್ರ ವಿಭಾದ ಮುಖ್ಯಸ್ಥರು ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಉಪನಿರ್ದೇಶಕರಾದ ಮಾರುತಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಡಾ. ದಯಾನಂದ ಪೈ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ರೂಪ ಎಲ್ ಭಟ್, ಆದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಸಂಜೀವ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ ಇ ಓ ದಿನೇಶ್ ಎಂ ಕೊಡವೂರು, ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ದಂಡತೀರ್ಥ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ಸುರತ್ ಕುಮಾರ್ ಸ್ವಾಗತಿಸಿ, ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಡಾ. ಪ್ರಜ್ವಲ್ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!