Saturday, October 17, 2026
Saturday, October 17, 2026

ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ

ರಕ್ತದಾನದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ: ರಾಜೀವ ಶೆಟ್ಟಿ

Date:

ಉಡುಪಿ, ಜೂ.16: ಉಡುಪಿ ಜಿಲ್ಲೆಯಲ್ಲಿ ಸಾವಿರಾರು ರಕ್ತದಾನಿಗಳಿದ್ದಾರೆ. ಇಂದು ಅವರಿಂದಾಗಿ ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರವು ಮಹತ್ವವನ್ನು ಪಡೆದಿದೆ. ಜಿಲ್ಲೆಯು ರಾಜ್ಯದಲ್ಲೇ ರಕ್ತದಾನಿಗಳ ಜಿಲ್ಲೆ ಎಂದು ಗುರುತಿಸಲ್ಪಟ್ಟು ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಕ್ತನಿಧಿ ಕೇಂದ್ರ ಕುಂದಾಪುರ ಮತ್ತು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ ಉಡುಪಿ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತಾನಾಡಿದರು. ಕುಂದಾಪುರ ರೆಡ್‌ಕ್ರಾಸ್ ಸಭಾಪತಿ ಜಯಕರ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆಯಿದ್ದು ರಕ್ತದಾನದ ಬಗ್ಗೆ ಇನ್ನಷ್ಟು ಅರಿವು ಮೂಡಿಸುವ ಅಗತ್ಯವಿದೆ ಎಂದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನ ಸುವರ್ಣ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು. ಹಲವು ಬಾರಿ ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಿದ ರಕ್ತದಾನಿಗಳಾದ ಸುಕನ್ಯಾ ಎಂ. ಕಳಸ, ಅಕ್ಷತ್ ನಾಯಕ್, ವಿಶ್ವನಾಥ ನಾಯಕ್, ರಘುರಾಮ್, ಶಿವಕುಮಾರ್ ಶೆಟ್ಟಿಗಾರ್ ಮತ್ತು ರಮೇಶ್ ಕರ್ಕೇರರವರನ್ನು ಜಿಲ್ಲಾ ರೆಡ್‌ಕ್ರಾಸ್ ಪರವಾಗಿ ಸನ್ಮಾನಿಸಲಾಯಿತು.

ಸುಕನ್ಯ ಎಂ. ಕಳಸ ಮತ್ತು ಶಿವಕುಮಾರ್ ಶೆಟ್ಟಿಗಾರ್ ಸನ್ಮಾನಿತರ ಪರವಾಗಿ ರಕ್ತದಾನದ ಬಗ್ಗೆ ತಮ್ಮ ಅನುಭವಗಳನ್ನು ಹಂಚಿಕೊಂಡರು. ಜಿಲ್ಲಾ ರೆಡ್‌ಕ್ರಾಸ್ ಉಪಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ, ಆಡಳಿತ ಮಂಡಳಿಯ ಸದಸ್ಯ ಟಿ. ಚಂದ್ರಶೇಖರ್ ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ, ರೆಡ್‌ಕ್ರಾಸ್ ಸದಸ್ಯ ಪ್ರೊ. ದಯಾನಂದ ಡಿ. ನಿರೂಪಿಸಿ, ರೆಡ್‌ಕ್ರಾಸ್ ಖಚಾಂಚಿ ರಮಾದೇವಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!