Sunday, August 30, 2026
Sunday, August 30, 2026

ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ..ಅಶೋಕ್ ಕುಮಾರ್ ಆಯ್ಕೆ

ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ಡಾ..ಅಶೋಕ್ ಕುಮಾರ್ ಆಯ್ಕೆ

Date:

ಉಡುಪಿ, ಜೂ.20: ರೆಡ್‌ಕ್ರಾಸ್ ಭವನದಲ್ಲಿ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ಮುಂದಿನ ವಾರ್ಷಿಕ ಮಹಾಸಭೆಯವರೆಗೆ ಜಿಲ್ಲಾ ರೆಡ್‌ಕ್ರಾಸ್ ಸಭಾಪತಿಗಳಾಗಿ ವೈದ್ಯರಾದ ಡಾ. ಅಶೋಕ್ ಕುಮಾರ್ ವೈ.ಜಿ. ಅವರನ್ನು ನೇಮಕ ಮಾಡಲಾಯಿತು. ಕರ್ನಾಟಕ ರಾಜ್ಯ ರೆಡ್‌ಕ್ರಾಸ್‌ನ ಸಭಾಪತಿಗಳಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಜಿಲ್ಲಾ ಸಭಾಪತಿ ಸ್ಥಾನಕ್ಕೆ ಬಸ್ರೂರು ರಾಜೀವ್ ಶೆಟ್ಟಿ ಸಭಾಪತಿ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ಅಂಗೀಕರಿಸಿದ ಆಡಳಿತ ಮಂಡಳಿಯು ಈ ನೇಮಕ ಮಾಡಿದೆ. ಡಾ.ಅಶೋಕ್ ಕುಮಾರ್ ವೈ.ಜಿಯವರು ಬಸ್ರೂರು ರಾಜೀವ್ ಶೆಟ್ಟಿ ಅವರಿಂದ ಸಭಾಪತಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಕಳೆದ ಒಂದೂವರೆ ದಶಕದಿಂದ ಜಿಲ್ಲಾ ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯರಾಗಿದ್ದರು. ಜಿಲ್ಲಾ ರೆಡ್‌ಕ್ರಾಸ್ಸಿನ ಉಪಸಭಾಪತಿಯಾಗಿ ಆಡಳಿತ ಮಂಡಳಿಯ ಸದಸ್ಯರಾದ ವಿ.ಜಿ. ಶೆಟ್ಟಿಯವರನ್ನು ಆಡಳಿತ ಮಂಡಳಿಯು ನೇಮಿಸಿ ಅವರು ಅಧಿಕಾರ ಸ್ವೀಕರಿಸಿದರು. ಸಭಾಪತಿಯಾಗಿ ಸೇವೆ ಸಲ್ಲಿಸಿ ಈಗ ಕರ್ನಾಟಕ ರಾಜ್ಯ ಸಭಾಪತಿಗಳಾಗಿರುವ ಬಸ್ರೂರು ರಾಜೀವ್ ಶೆಟ್ಟಿ ಅವರ ಸೇವೆಯನ್ನು ಆಡಳಿತ ಮಂಡಳಿ ಪ್ರಶಂಶಿಸಿದೆ. ಅವರು ಜಿಲ್ಲಾ ಆಡಳಿತ ಮಂಡಳಿ ಸದಸ್ಯರಾಗಿ ಮುಂದುವರಿಯುತ್ತಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!