Saturday, September 26, 2026
Saturday, September 26, 2026

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಅರಿವು ಕಾರ್ಯಕ್ರಮ

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಅರಿವು ಕಾರ್ಯಕ್ರಮ

Date:

ಉಡುಪಿ, ಜೂ.20: ಉಡುಪಿ ನಗರಸಭೆ ಹಾಗೂ ಆರೋಗ್ಯ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಮಿಕ ರೋಗಗಳನ್ನು ನಿಯಂತ್ರಣ ಮಾಡಲು ಸೂಕ್ತ ಕ್ರಮ ವಹಿಸುವ ಕುರಿತು ಉಡುಪಿ ನಗರಸಭಾ ವ್ಯಾಪ್ತಿಯ ಬಿಲ್ಡರ್ಸ್ ಮತ್ತು ಕಾರ್ಮಿಕರಿಗೆ ಶೆಲ್ಟರ್ ಒದಗಿಸಿದ ಮಾಲೀಕರಿಗೆ ಅರಿವು ಮೂಡಿಸುವ ಕಾರ್ಯಗಾರವು ಮಂಗಳವಾರ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ ಅವರು ಮಳೆಗಾಲದ ಸಂದರ್ಭದಲ್ಲಿ ಸಾಂಕ್ರಮಿಕ ರೋಗಗಳನ್ನು ನಿಯಂತ್ರಣ ಮಾಡಲು ಸೂಕ್ತ ಕ್ರಮ ವಹಿಸುವ ಕುರಿತು ಮಾಹಿತಿಯನ್ನು ನೀಡಿ, ಮಲೇರಿಯಾ ಡೆಂಗ್ಯೂ ಮುಂತಾದ ಸಾಂಕ್ರಮಿಕ ರೋಗಗಳು ಜುಲೈನಿಂದ ನವೆಂಬರ್‌ವರೆಗೆ 5 ತಿಂಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉಲ್ಬಣಗೊಳ್ಳುತ್ತದೆ. ಜಿಲ್ಲೆಯನ್ನು ಸ್ವಚ್ಛ ಮತ್ತು ಆರೋಗ್ಯಕರವಾಗಿಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ಮನೆಗಳ ಸುತ್ತ, ಕಟ್ಟಡ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ, ತಮ್ಮ ಪರಿಸರದಲ್ಲಿ ಕೊಳಚೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕಟ್ಟಡ ಕಾಮಗಾರಿ, ಲೇಬರ್ ಶೆಡ್‌ಗಳ ಪರಿಸರದಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚಾಗಿರುವುದರಿಂದ ಇಂತಹ ಪರಿಸದರಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಇಲ್ಲಿ ಉತ್ಪತ್ತಿಯಾಗುವ ಸೊಳ್ಳೆಗಳು ಕೇವಲ ಇಲ್ಲಿನ ಕಾರ್ಮಿಕರನ್ನು ಮಾತ್ರವಲ್ಲದೇ ಇತರರನ್ನೂ ಬಾಧಿಸುತ್ತದೆ. ಆದ್ದರಿಂದ ಕಟ್ಟಡ ಕಾಮಗಾರಿ ಪ್ರದೇಶದಲ್ಲಿ ಬೇರೆ ಬೇರೆ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರಿಕರಿಗೆ ಕಡ್ಡಾಯವಾಗಿ ರಕ್ತ ಪರೀಕ್ಷೆ ನಡೆಸಬೇಕು ಹಾಗೂ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಚಿಕಿತ್ಸೆಗೆ ಒಳಪಡಿಸಬೇಕು ಎಂದು ಸೂಚನೆ ನೀಡಿದರು.

ಕೀಟ ಶಾಸ್ತ್ರಜ್ಞೆ ಮುಕ್ತಾ ಮಾಹಿತಿ ನೀಡಿ ಮಾತನಾಡುತ್ತಾ, ಜಿಲ್ಲೆಯ ಅಭಿವೃದ್ಧಿ ಜೊತೆಗೆ ನಮ್ಮ ಆರೋಗ್ಯದ ಅಭಿವೃದ್ಧಿ ಬಗ್ಗೆಯೂ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಫೈಲೇರಿಯಾ, ಮೆದುಳು ಜ್ವರ ಮುಂದಾದ ಸಾಂಕ್ರಮಿಕ ರೋಗಗಳು ಸೊಳ್ಳೆಗಳ ಕಡಿತದಿಂದಲೇ ಬರುತ್ತದೆ. ಸೊಳ್ಳೆಗಳ ಗಾತ್ರ ಸಣ್ಣದಾಗಿದ್ದರೂ ಅದರ ಕಡಿತ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತದೆ. ಇದು ಮಾರಣಾಂತಿಕ ಕಾಯಿಲೆಯನ್ನು ತರುತ್ತದೆ. ತಲೆನೋವು, ಜ್ವರ, ವಾಂತಿ ಮುಂತಾದ ರೋಗ ಲಕ್ಷಣಗಳು ಕಂಡು ಬಂದಲ್ಲಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳಬೇಕು ಎಂದರು. ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಇಲಿ ಜ್ವರದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿ, ಇಲಿ ಜ್ವರವು ಇಲಿಯ ಮೂತ್ರಗಳು ನೀರಿನಲ್ಲಿ ಸೇರಿ ಆ ನೀರನ್ನು ಬರೀಗಾಲಲ್ಲಿ ತುಳಿಯುವುದರಿಂದ ರೋಗ ಹರಡುತ್ತದೆ. ಆದ್ದರಿಂದ ಯಾರೂ ಬರೀ ಕಾಲಿನಲ್ಲಿ ನಡೆಯದಂತೆ ಸೂಚನೆ ನೀಡಿದರು. ನೊಣಗಳು ಕೊಳೆತ ತ್ಯಾಜ್ಯದಿಂದ ಉತ್ಪತ್ತಿಯಾಗುವುದರಿಂದ ಸ್ವಚ್ಛತೆ ಇಲ್ಲದ ಕಡೆ ನೊಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಇವುಗಳೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ನೊಣಗಳ ಬಗ್ಗೆಯೂ ಜಾಗೃತೆ ವಹಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಸಾರ್ವಜನಿಕರು ತ್ಯಾಜ್ಯವನ್ನು ನಗರಸಭಾ ವಾಹನಕ್ಕೆ ನೀಡುವಾಗ ವಿಂಗಡಣೆ ಮಾಡಿಯೇ ನೀಡಬೇಕು ಎಂದು ನಿರ್ದೇಶನ ತಿಳಿಸಿದರು.

ಉಡುಪಿ ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರು, ನಗರಸಭೆಯ ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಉಡುಪಿ ನಗರಸಭಾ ವ್ಯಾಪ್ತಿಯ ಬಿಲ್ಡರ್ಸ್ ಮತ್ತು ಕಾರ್ಮಿಕರಿಗೆ ಶೆಲ್ಟರ್ ಒದಗಿಸಿದ ಮಾಲೀಕರು ಉಪಸ್ಥಿತರಿದ್ದರು. ಪರಿಸರ ಅಭಿಯಂತರ ರವಿ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!