Saturday, September 12, 2026
Saturday, September 12, 2026

ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ

ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ

Date:

ಕೋಟ, ಜೂ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿವೇಕ ಪದವಿಪೂರ್ವ ಕಾಲೇಜು ಕೋಟ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಗಾರ ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ ನಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವದ ಉಪ ನಿರ್ದೇಶಕರಾದ ಮಾರುತಿ ಕಾರ್ಯಗಾರವನ್ನು ಉದ್ಘಾಟಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ ಜಗದೀಶ ನಾವುಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕೋಟ ವಿದ್ಯಾ ಸಂಘದ ಖಜಾಂಜಿ ವೆಲೇರಿಯನ್ ಮೆನೇಜಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್ ನ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ ಜಿ ಕಲಿಕಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗೆಗೆ ದಿಕ್ಸೂಚಿ ಉಪನ್ಯಾಸವನ್ನು ನೀಡಿದರು.

ಉಪನ್ಯಾಸಕರಾದ ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಲೆಕ್ಕಶಾಸ್ತ್ರ ಮತ್ತು ವ್ಯವಹಾರ ಅಧ್ಯಯನ ವಿಷಯಗಳ ಬಗೆಗೆ ಮಾಹಿತಿಗಳನ್ನು ಹಂಚಿಕೊಂಡರು. ಮಾರುತಿ ಅವರನ್ನು ಉಪನ್ಯಾಸಕರ ಸಂಘದ ಹಾಗೂ ಕೋಟದ ಆಡಳಿತ ಮಂಡಳಿಯ ಪರವಾಗಿ ಗೌರವಿಸಿ ಸನ್ಮಾನಿಸಲಾಯಿತು. ಕಳೆದ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಗ್ರ ಸ್ಥಾನಗಳನ್ನು ಪಡೆದ ವಿದ್ಯಾರ್ಥಿಗಳನ್ನು ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಅನಿತಾ ಹೊಳ್ಳ ಮತ್ತು ಅರುಣ ಹೊಳ್ಳ ಪ್ರಾರ್ಥಿಸಿದರು. ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಸ್ವಾಗತಿಸಿದರು. ಸಂತೋಷ್ ಕುಮಾರ್ ಪ್ರಾಸ್ತಾವಿಕ ಮಾತುಗಳಾಡಿದರು. ಗ್ರೆಟ್ಟಾ ಮೋರೆಸ್ ಮತ್ತು ಡಾ. ಪ್ರತಿಮಾ ಭಟ್ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರಾದ ಸಂಜೀವ ಗುಂಡ್ಮಿ, ಉಷಾ ಮತ್ತು ನೇತ್ರಾ ಸಹಕರಿಸಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು ಸಂಘದ ಕಾರ್ಯದರ್ಶಿ, ಸುಮಂಗಲ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!