Sunday, September 20, 2026
Sunday, September 20, 2026

ಸರಸ್ವತಿ ವಿದ್ಯಾಲಯದಲ್ಲಿ ಬೀಳ್ಕೊಡುಗೆ ಸಮಾರಂಭ

ಸರಸ್ವತಿ ವಿದ್ಯಾಲಯದಲ್ಲಿ ಬೀಳ್ಕೊಡುಗೆ ಸಮಾರಂಭ

Date:

ಗಂಗೊಳ್ಳಿ, ಜೂ.26: ಜಿ.ಎಸ್​.ವಿ.ಎಸ್ ಅಸೋಸಿಯೇಷನ್ ಮತ್ತು ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ವತಿಯಿಂದ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ಸಂಸ್ಥೆಯಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸುದೀರ್ಘ ವರ್ಷಗಳ ಕಾಲ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಾರಾಯಣ ಈ ನಾಯ್ಕ್, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಎಂ ರಾಘವೇಂದ್ರ ಭಟ್, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಲತಾ, ಭೌತಶಾಸ್ತ್ರ ಪ್ರಯೋಗಾಲಯದ ಸಹಾಯಕರಾಗಿ ಸೇವೆ ಸಲ್ಲಿಸಿದ ವಿಜಯ್ ಕುಮಾರ್, ಹೈಸ್ಕೂಲ್ ವಿಭಾಗದ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಿದ ಯಮುನಾ ಭಾಸ್ಕರ್ ಮತ್ತು ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಜೀವನ್ ನಾಯಕ್ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.

ಉಪನ್ಯಾಸಕರಾದ ವೆಂಕಟೇಶ ಮೂರ್ತಿ ಎನ್. ಸಿ, ನರೇಂದ್ರ ಎಸ್ ಗಂಗೊಳ್ಳಿ ಮತ್ತು ಕಚೇರಿಯ ಪ್ರಮೋದ ಪೈ ಎಂ.ಜಿ ನಿವ್ರತ್ತರಿಗೆ ಶುಭ ಹಾರೈಸಿದರು. ಜಿಎಸ್ ಬಿಎಸ್ ಅಸೋಸಿಯೇಷನ್ನ ಅಧ್ಯಕ್ಷ ಡಾಕ್ಟರ್ ಕಾಶಿನಾಥ್ ಅಧ್ಯಕ್ಷತೆ ವಹಿಸಿದ್ದರು. ಈ ಸಮಾರಂಭದಲ್ಲಿ ಅಸೋಸಿಯೇಷನ್ ಹೆಚ್ ಗಣೇಶ್ ಕಾಮತ್ ಎನ್ ಸದಾಶಿವ ನಾಯಕ್, ಪ್ರಾಂಶುಪಾಲೆ ಕವಿತಾ ಎಂ ಸಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು. ಉಪನ್ಯಾಸಕ ಸುಜಯೀಂದ್ರ ಹಂದೆ ಪ್ರಾರ್ಥಿಸಿದರು ಉಪನ್ಯಾಸಕ ಥಾಮಸ್ ಪಿ.ಎ ಸ್ವಾಗತಿಸಿದರು. ಉಪನ್ಯಾಸಕಿ ಪವಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಸ್ಥರಾದ ಗೋಪಾಲ ದೇವಾಡಿಗ ಧನ್ಯವಾದ ಸಮರ್ಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಕಳ ಜ್ಞಾನಸುಧಾ: ಜಿಲ್ಲಾಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ ಉದ್ಘಾಟನೆ

ಕಾರ್ಕಳ, ಸೆ.18: ಸೋತಾಗ ಸವಾಲು, ಗೆದ್ದಾಗ ಸಂತೋಷ ನೀಡುತ್ತಾ ಬೆಳೆಯಲು ಅವಕಾಶವಿದ್ದರೆ...

ಸೆ. 21 ರಂದು ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.19: ನಗರದ ಓಮ್ನಿಯಾನ್ ಪ್ರೀಮಿಡಿಯಾ ಪ್ರೆವೇಟ್ ಲಿಮಿಟೆಡ್, ರೀಗಲ್ ಎಂಟ್ರಿ,...

ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮಂಗಳೂರು, ಸೆ.18: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ...
error: Content is protected !!