Wednesday, July 22, 2026
Wednesday, July 22, 2026

ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

ಮಣಿಪಾಲ: ಪಲ್ಸ್ ಪೋಲಿಯೋ ಅಭಿಯಾನ ತರಬೇತಿ ಕಾರ್ಯಾಗಾರ

Date:

ಮಣಿಪಾಲ, ಜೂ.26: ತಜ್ಞರ ಸಲಹಾ ಗುಂಪಿನ ಶಿಫಾರಸ್ಸಿನನ್ವಯ ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡಲು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಸಲುವಾಗಿ ದೇಶದಾದ್ಯಂತ ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ ಅಭಿಯಾನದ ಆಂಗವಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಸಮುದಾಯ ವೈದ್ಯಕೀಯ ವಿಭಾಗ, ಕೆ.ಎಂ.ಸಿ. ಮಣಿಪಾಲ ಇವರ ಸಹಯೋಗದೊಂದಿಗೆ ಈ ಅಭಿಯಾನದಲ್ಲಿ ಭಾಗವಹಿಸುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಉಡುಪಿಯ ಆರೋಗ್ಯ ಕಾರ್ಯಕರ್ತರುಗಳು ಹಾಗೂ ಸ್ವಯಂ ಸೇವಕರಾದ ಮಣಿಪಾಲ್ ಕಾಲೇಜ್ ಆಫ್ ನರ್ಸಿಂಗ್ ಹಾಗೂ ಮಣಿಪಾಲ್ ಸ್ಕೂಲ್ ಆಫ್ ನರ್ಸಿಂಗ್ ಮಣಿಪಾಲ, ಉಡುಪಿ ಕಾಲೇಜ್ ಆಫ್ ನರ್ಸಿಂಗ್ ಇವರಿಗೆ ತರಬೇತಿಯು ಕೆ.ಎಂ.ಸಿ. ಇಂಟರ್ಯಾಕ್ಟ್ ಸಭಾಂಗಣದಲ್ಲಿ ನಡೆಯಿತು.

ಈ ಅಭಿಯಾನದಲ್ಲಿ ಪ್ರತೀ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಜೂನ್ 28 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ಸಂಜೆ ಐದು ಗಂಟೆ ವರೆಗೆ ಅಲ್ಲಿನ ಬೂತ್‌ಗಳಲ್ಲಿ ಪೋಲಿಯೋ ಲಸಿಕೆ ನೀಡಲಾಗುವುದು ಹಾಗೂ ಜೂನ್ 28 ರಿಂದ ಜುಲೈ 1 ರ ವರೆಗೆ ಆರೋಗ್ಯ ಕಾರ್ಯಕರ್ತರು, ಸ್ವಯಂ ಸೇವಕರು ಮನೆ-ಮನೆ ಭೇಟಿ ನೀಡುವ ಕಾರ್ಯಕ್ರಮವಿದೆ. ಈ ಎಲ್ಲಾ ನಾಲ್ಕು ದಿನಗಳಲ್ಲಿ ಸಂಚಾರ ಕೇಂದ್ರಗಳಲ್ಲಿ ಹಾಗೂ ಹೆಚ್ಚಿನ ಜನ ಸಂದಣಿ ಇರುವ ಪ್ರದೇಶಗಳಲ್ಲಿ, ವಲಸೆ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ನಡೆಸಲಾಗುವುದು. ಆ ಮೂಲಕ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ಪೋಲಿಯೋ ಲಸಿಕೆ ನೀಡುವ ಎಲ್ಲಾ ಪ್ರಯತ್ನ ಮಾಡಲಾಗುವುದು. ಈ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಯಶ್ ಅಲೋಕ್ ಹಾಗೂ ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯವರಾದ ಡಾ. ಶಾಮಿನಿ ಕುಮಾರ್ ಅವರು ಭಾಗವಹಿಸಿದರು.

ಸಮುದಾಯ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್ ಅವರು ಮಾರ್ಗದರ್ಶನ ನೀಡಿದರು. ತರಬೇತಿ ಕಾರ್ಯಾಗಾರದಲ್ಲಿ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ 220 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು. ಈ ಕಾರ್ಯಕರ್ತರು, ಸ್ವಯಂ ಸೇವಕರು ಉಡುಪಿ, ಮಣಿಪಾಲ, ಮಲ್ಪೆ, ಮಣಿಪುರ, ಪೆರ್ಣಂಕಿಲ ವ್ಯಾಪ್ತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಸಹಕರಿಸಲಿದ್ದಾರೆ. ಕೆ.ಎಂ.ಸಿ. ಮಣಿಪಾಲ ಹಾಗೂ ರೋಟರಿ ಕ್ಲಬ್, ಮಣಿಪಾಲ ಸಹ ಈ ಕಾರ್ಯಕ್ರಮದಲ್ಲಿ ಸಹಕಾರ ನೀಡಲಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!