Sunday, October 18, 2026
Sunday, October 18, 2026

ಪಂಚವರ್ಣದಿಂದ ಮಾದರಿ ಕಾರ್ಯಕ್ರಮ: ಶರತ್ ಕುಮಾರ್ ಶೆಟ್ಟಿ

ಪಂಚವರ್ಣದಿಂದ ಮಾದರಿ ಕಾರ್ಯಕ್ರಮ: ಶರತ್ ಕುಮಾರ್ ಶೆಟ್ಟಿ

Date:

ಕೋಟ, ಜೂ.27: ಪಂಚವರ್ಣ ಸಂಘಟನೆಯಿಂದ ರೈತ ಪರಿಸರ ಸ್ನೇಹಿ ಕಾರ್ಯಕ್ರಮಗಳು ಜನಮನ್ನಣೆ ಗಳಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಶುಕ್ರವಾರ ಕೋಟದ ಪಂಚವರ್ಣ ಯುವಕ‌ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ 55ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ 55ನೇ ರೈತ ಪುರಸ್ಕಾರವನ್ನು ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರಿಗೆ ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು.

ಪರಿಸರಸ್ನೇಹಿ ಹಸಿರು ಗಿಡವನ್ನು ನೆಟ್ಟು, ಗೋ ಪೂಜೆ ನೆರವೇರಿಸಿ ಕಾರ್ಯಕ್ರಮಕ್ಕೆ ಕೋಟತಟ್ಟು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಸತೀಶ್ ಕುಂದರ್ ಚಾಲನೆ ನೀಡಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ರೈತ ಪುರಸ್ಕಾರವನ್ನು ಸಕಡ್ ಫೌಂಡೇಶನ್ ಮುಖ್ಯಸ್ಥ ಕೋಟ ಶ್ರೀಕಾಂತ್ ಶೆಣೈ ನೆರವೇರಿಸಿದರು. ಮುಖ್ಯ ಅಭ್ಯಾಗತರಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ‌.ತಾರಾನಾಥ ಹೊಳ್ಳ, ರೈತಧ್ವನಿ ಸಂಘದ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ, ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಅಜಿತ್ ಆಚಾರ್ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮವನ್ನು ಸದಸ್ಯರಾದ ಪ್ರಭಾಕರ್ ಮಣೂರು ನಿರೂಪಿಸಿದರು. ರವೀಂದ್ರ ಕೋಟ ವಂದಿಸಿ ಸಂಯೋಜಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!