Sunday, July 26, 2026
Sunday, July 26, 2026

ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ

ಪರಿಸರದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಅಗತ್ಯ: ಎಂ.ಎನ್ ಮಧ್ಯಸ್ಥ

Date:

ಕೋಟ, ಜೂ.29: ಮುಂದಿನ ತಲೆಮಾರಿಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರೂ ಮಾಡಿದರೆ ಮಾತ್ರ ಹಸಿರು ಕ್ರಾಂತಿ ಸೃಷ್ಟಿ ಸಾಧ್ಯ ಎಂದು ಶಿಕ್ಷಣ ತಜ್ಞ ಮಣೂರು ನರಸಿಂಹ ಮಧ್ಯಸ್ಥ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು, ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸ್ಥಳೀಯ ಸಂಘಟನೆಗಳ ಸಹಯೋಗದೊಂದಿಗೆ ೩೦೭ನೇ ವಾರದ ಪರಿಸರ ಸ್ನೇಹಿ ಹಸಿರು ಹೆಜ್ಜೆ ಅಭಿಯಾನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗಿಡ ಹಸ್ತಾಂತರಿಸಿ ಮಾತನಾಡಿದರು. ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ ಮನ ಮನೆಗೆ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ನೆರೆದಿದ್ದ ಪರಿಸರಾಸಕ್ತರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಣೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ, ಸಿಇಒ ಹರ್ಷ ಪೂಜಾರಿ, ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಇದ್ದರು. ರವೀಂದ್ರ ಕೋಟ ನಿರ್ವಹಿಸಿ, ಅಜಿತ್ ಆಚಾರ್ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!