Saturday, August 29, 2026
Saturday, August 29, 2026

ಸಿ.ಎ. ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳಲ್ಲಿ ಪನ್ನಗ ತೇರ್ಗಡೆ

ಸಿ.ಎ. ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳಲ್ಲಿ ಪನ್ನಗ ತೇರ್ಗಡೆ

Date:

ಕುಂದಾಪುರ, ಜೂ.30: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿ.ಎ. ಇಂಟರ್ ಮೀಡಿಯಟ್ ಮೇ 2026ರ ಪರೀಕ್ಷೆಯಲ್ಲಿ ಕುಂಭಾಶಿಯ ಸುರೇಶ್ ಎಸ್.ಎ. ಮತ್ತು ಪುಷ್ಪ ದಂಪತಿಗಳ ಪುತ್ರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾಕ್ತನ ವಿದ್ಯಾರ್ಥಿ ಪನ್ನಗ ಅವರು ಗ್ರೂಪ್–2ರಲ್ಲಿ ಯಶಸ್ಸು ಸಾಧಿಸುವ ಮೂಲಕ, ಈಗಾಗಲೇ ಉತ್ತೀರ್ಣರಾಗಿದ್ದ ಗ್ರೂಪ್–1 ಜೊತೆಗೆ ಸಿ.ಎ. ಇಂಟರ್ ಮೀಡಿಯಟ್‌ನ ಎರಡೂ ಗ್ರೂಪ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಪನ್ನಗ ಅವರ ಈ ಗಮನಾರ್ಹ ಸಾಧನೆಗಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಅಲ್ಲದೆ, ಅವರು ಮುಂದಿನ ಸಿ.ಎ. ಫೈನಲ್ ಹಂತದಲ್ಲಿಯೂ ಅತ್ಯುತ್ತಮ ಸಾಧನೆ ಮಾಡಿ ಉಜ್ವಲ ವೃತ್ತಿಜೀವನವನ್ನು ರೂಪಿಸಲಿ ಎಂದು ಶುಭ ಹಾರೈಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!