Monday, November 16, 2026
Monday, November 16, 2026

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ

Date:

ಉಡುಪಿ, ಜು.1: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಉಡುಪಿ ಶಾಖೆ ಮಳಿಗೆಯಲ್ಲಿ ಬುಧವಾರ ಪ್ರದಾನ ಮಾಡಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮಕ್ಕಳು, ಯುವಜನತೆ ಸಮಾಜಮುಖಿಯಾಗಿ ಪರಿಸರ ಕಾಳಜಿ ಹೊಂದುವುದು ಅಗತ್ಯ ಮತ್ತು ಅನಿವಾರ್ಯ. ಮಕ್ಕಳಿಗೆ ಉಪದೇಶದ ಬದಲು ಯಾವುದೇ ಉತ್ತಮ ಕೆಲಸವನ್ನು ಮಾಡಿ ತೋರಿಸಬೇಕು. ಮನೆಗಳಲ್ಲಿ ಗ್ರಂಥಾಲಯ ರೂಪುಗೊಂಡರೆ ಬೌದ್ಧಿಕ ಶ್ರೀಮಂತಿಕೆ ಹೆಚ್ಚಳ ಸಾಧ್ಯ ಎಂದು ಹೇಳಿದರು.

ಪಾಂಡೇಶ್ವರ ಗುರುಕುಲದ ಡಾ. ವಿಜಯ ಕುಮಾರ್ ಮಂಜರ್ ಅಧ್ಯಕ್ಷತೆ ವಹಿಸಿ, ಸಂಗೀತ, ಕಲೆ, ಸಾಹಿತ್ಯದಿಂದ ಜೀವನ ಪರಿಪೂರ್ಣ. ಇವು ಮೂರೂ ಇಲ್ಲದವ ಬಾಲ, ಕೊಂಬಿಲ್ಲದ, ಆದರೆ ಹುಲ್ಲೂ ತಿನ್ನದ ಪಶುವಿಗೆ ಸಮಾನ. ವ್ಯಕ್ತಿಯ ದೇಹ, ಮನಸ್ಸಿನ ಆರೋಗ್ಯ ಕಾಪಾಡುವ ವೈದ್ಯ, ವ್ಯಕ್ತಿ/ಸಂಸ್ಥೆಯ ಆರ್ಥಿಕ ಕಾಪಾಡುವ ಲೆಕ್ಕ ಪರಿಶೋಧಕ, ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತ ಸಮಾಜದಲ್ಲಿ ಪ್ರಾಮುಖ್ಯತೆ ಪಡೆದಿದ್ದಾರೆ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠ್ಠಾನದ ಸ್ಥಾಪಕ ಯು.ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ. ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ಶಂಕರ್, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವ್ಯವಸ್ಥಾಪಕ ವಿಜಯ್ ಕುಮಾರ್ ಡಿ. ಉಪಸ್ಥಿತರಿದ್ದರು.

ಪುರಸ್ಕಾರ ಪ್ರದಾನ: ಮಲಬಾರ್ ವಿಶ್ವ ವೈದ್ಯ ಪುರಸ್ಕಾರವನ್ನು ಡಾ. ಎ. ರಾಮಚಂದ್ರ ಬಾಯರಿ, ಡಾ. ಕೆ.ಸತೀಶ್ ಕಾಮತ್, ಡಾ. ಇಂದಿರಾ ವಿ.ಶಾನುಭೋಗ್, ಮಲಬಾರ್ ವಿಶ್ವ ಲೆಕ್ಕ ಪರಿಶೋಧಕರ ಪುರಸ್ಕಾರವನ್ನು ಸಿಎ ದೇವ ಆನಂದ್, ಸಿಎ ಗಣೇಶ್ ಎರ್ಮಾಳು ಹಾಗೂ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರವನ್ನು ಶಶಿಧರ್ ಮಾಸ್ತಿಬೈಲು, ಬಾಲಕೃಷ್ಣ ಪೂಜಾರಿ ಉಚ್ಚಿಲ, ರಾಮ್ ಅಜೆಕಾರ್ ಸ್ವೀಕರಿಸಿದರು.

ಸನ್ಮಾನ ಪತ್ರವನ್ನು ಡಾ. ಭಾರ್ಗವಿ ಐತಾಳ್, ಸಿದ್ಧಬಸಯ್ಯಸ್ವಾಮಿ ಚಿಕ್ಕಮಠ, ರಂಜನಿ ವಸಂತ್ ವಾಚಿಸಿದರು. ವಿಘ್ನೇಶ್ವರ ಅಡಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾ ಶ್ಯಾಮ ಸುಂದರ್ ಪ್ರಾರ್ಥಿಸಿದರು. ಜನಾರ್ದನ ಕೊಡವೂರು ಸ್ವಾಗತಿಸಿ, ರಾಜೇಶ್ ಪಣಿಯಾಡಿ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!