Saturday, September 26, 2026
Saturday, September 26, 2026

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಬಿಡುಗಡೆ

Date:

ಗಂಗೊಳ್ಳಿ, ಜು.2: ಲೋಕ ದೃಷ್ಟಿ ಸಾಹಿತ್ಯದ ಮೂಲಸೆಲೆ. ಜೀವನಾನುಭವದಿಂದ ಲೋಕದೃಷ್ಟಿಯನ್ನು ಸಾಧ್ಯವಾಗಿಸಿಕೊಳ್ಳಬಹುದು. ಭಾಷೆ ಎಂಬುದು ಸಮೂಹದಿಂದ ಸಿದ್ಧಿಯಾಗುತ್ತದೆ. ಬದುಕನ್ನು ಪ್ರತಿಫಲಿಸಿದಾಗ ಯಾವುದೇ ಸಾಹಿತ್ಯವು ಮೌಲ್ಯಯುತವಾಗುತ್ತದೆ. ಹೆಚ್ಚಿನ ಓದು ನಮ್ಮ ಮನಸ್ಸುಗಳನ್ನು ಅರಳಿಸುತ್ತದೆ. ಕಲ್ಪನೆಗಳನ್ನು ಗರಿಗೆದರಿಸಿಕೊಂಡಾಗ ಸಾಹಿತ್ಯ ರಚನೆ ಸಾಧ್ಯ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರೂಪಿಸಿಕೊಳ್ಳುವುದಕ್ಕೆ ಬರವಣಿಗೆ ಸಶಕ್ತ ಮಾಧ್ಯಮವಾಗಿದೆ” ಎಂದು ಸಾಂಸ್ಕೃತಿಕ ಚಿಂತಕ ತಿಮ್ಮಪ್ಪ ಗುಲ್ವಾಡಿ ಹೇಳಿದರು. ಬುಧವಾರ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕ ಸಂಚಿಕೆ ‘ದೃಷ್ಟಿ’ ಬಿಡುಗಡೆ ಮಾಡಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಕಾಲೇಜಿನ ಕಾರ್ಯದರ್ಶಿ ಎನ್. ಸದಾಶಿವ ನಾಯಕ್, ಸಂಪಾದಕ ಮಂಡಳಿಯ ಸದಸ್ಯ ನಾರಾಯಣ ಇ.ನಾಯ್ಕ್, ವಿದ್ಯಾರ್ಥಿನಿ ತನಿಷಾ ಉಪಸ್ಥಿತರಿದ್ದರು. ನಿರ್ವಾಹಕ ಸಂಪಾದಕ ಎಚ್. ಸುಜಯೀಂದ್ರ ಹಂದೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಭೂಮಿಕ ವಂದಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಸುಪ್ರೀತ ಆಚಾರ್ಯ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!