Friday, September 25, 2026
Friday, September 25, 2026

ಶಾಲಾ ಅಕ್ಷರ ರಥ ಲೋಕಾರ್ಪಣೆ

ಶಾಲಾ ಅಕ್ಷರ ರಥ ಲೋಕಾರ್ಪಣೆ

Date:

ಕೋಟ, ಜು.2: ಸರಕಾರಿ ಶಾಲೆಗಳ ಉನ್ನತಿಗೆ ದಾನಿಗಳ ಸಹಕಾರ ಮಹತ್ತರ ಪಾತ್ರ ವಹಿಸುತ್ತದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ಹೇಳಿದರು. ಗುರುವಾರ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ದಾನಿಗಳ ನೆರವಿನಿಂದ ನೀಡಲಾದ ಅಕ್ಷರ ರಥ ವಾಹನವನ್ನು ಲೋಕಾರ್ಪಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ಶಾಲಾ ವಾಹನಕ್ಕೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ನೆರವೇರಿಸಲಾಯಿತು. ಶಾಲಾ ವಾಹನದ ಕೀ ಶಾಲಾ ಆಡಳಿತ ಮಂಡಳಿಗೆ ದಾನಿಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ದಾನಿಗಳಾದ ಮೇಬಿಲ್ ಥಾಮಸ್ ಡಿಸಿಲ್ವ, ಐರಿನ್ ಲೂಹಿಸ್, ಬಾಬು ಕುಂದರ್, ರಾಮದೇವ್ ಹಂದೆ, ಸವಿತಾ ಸೂಡಾ, ಅನ್ಯೋನ್ಯತಾ ವಾಹನ ಸಂಘ ಸಾಸ್ತಾನ ಉಪಾಧ್ಯಕ್ಷ ಉದಯ್ ಬಿ., ಪವಿತ್ರಾ ಇವರುಗಳ ಸಹಕಾರವನ್ನು ಸ್ಮರಿಸಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ಸಮವಸ್ತ್ರ ಕೊಡುಗೆಯಾಗಿ ನೀಡಿದ ಉಡುಪಿ ಪೋಲಿಸ್ ಇಲಾಖೆಯ ಜಯಕರ್ ಐರೋಡಿ, ವಿದ್ಯಾರ್ಥಿಗಳಿಗೆ ಬೆಲ್ಟ್, ಐಡಿಕಾರ್ಡ್, ಬ್ಯಾಗ್ ನೀಡಿದ ಬಾಂಧವ್ಯ ಕರ್ನಾಟಕ ಇದರ ದಿನೇಶ್ ಬಾಂಧವ್ಯ ಇವರುಗಳಿಗೆ ವಿಶೇಷ ಕೃತಜ್ಞತೆ ಸಲ್ಲಿಸಿ ಸನ್ಮಾನಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ರೇಖಾ ಉಡುಪ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಶಿಕ್ಷಣ ಸಂಯೋಜಕಿ ಅನ್ನಪೂರ್ಣೇಶ್ವರಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ನಿತ್ಯಾನಂದ ಶೆಟ್ಟಿ, ಹಂಗಾರಕಟ್ಟೆ ಕ್ಲಸ್ಟರ್ ಮಾಲಿನಿ, ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜಶೇಖರ್ ಹೆಬ್ಬಾರ್, ಐರೋಡಿ ಪಂಚಾಯತ್ ಮಾಜಿ ಅಧ್ಯಕ್ಷೆ ಗೀತಾ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಆನಂದ್ ಗಾಣಿಗ, ಶಾಲಾ ಎಸ್ ಡಿ ಎಂಸಿ ಉಪಾಧ್ಯಕ್ಷ ಶೇಖರ್ ಪೂಜಾರಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರಣೀತಾ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಸ್ಲಿಲ್ಲಾ ಸ್ವಾಗತಿಸಿ, ಶಿಕ್ಷಕಿ ವೀಣಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕಿ ಉಷಾರಾಣಿ ಕಾರ್ಯಕ್ರಮ ನಿರೂಪಿಸಿ, ವಿದ್ಯಾಶ್ರೀ ಎಂ.ಬಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!