Friday, September 25, 2026
Friday, September 25, 2026

ಕಾರಂತರು ಸಾರ್ಥಕ ಬದುಕಿಗೆ ಸಾಕ್ಷಿ: ಡಾ.ಗಣನಾಥ ಎಕ್ಕಾರು

ಕಾರಂತರು ಸಾರ್ಥಕ ಬದುಕಿಗೆ ಸಾಕ್ಷಿ: ಡಾ.ಗಣನಾಥ ಎಕ್ಕಾರು

Date:

ಉಡುಪಿ, ಜು.2: ಬದುಕನ್ನು ರೂಪಿಸಿಕೊಳ್ಳಲು ಪುಸ್ತಕಗಳು ಮಾರ್ಗದರ್ಶಕ, ವಿದ್ಯಾರ್ಥಿಗಳು ಪುಸ್ತಕವನ್ನು ಓದುವ ಹವ್ಯಾಸವನ್ನು ರೂಪಿಸಿಕೊಳ್ಳಬೇಕು. ಎಲ್ಲ ವಿಚಾರಗಳ ಕುರಿತು ಜ್ಞಾನ ಹೊಂದಿರುವುದು ಅತೀ ಅವಶ್ಯಕ. ಕಾರಂತರು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗದೇ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಕಾರ್ಯನಿರ್ವಹಿಸಿ, ಸಮಾಜಕ್ಕೆ ಅಪಾರವಾದ ಕೊಡುಗೆ ನೀಡುವುದರೊಂದಿಗೆ ಬದುಕಿನ ಮೌಲ್ಯಗಳನ್ನು ತಿಳಿಸಿ ಸಾರ್ಥಕವಾದ ಬದುಕನ್ನು ನಡೆಸಿದವರು ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು.

ಅವರು ಮಂಗಳವಾರ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕುಂದಾಪುರ ಇಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಮಕ್ಕಳಿಗಾಗಿ ಕಾರಂತರು-5 ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ ಚಿತ್ರಕಲೆಯ ಮೂಲಕ ಕಾರಂತರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಉಪಪ್ರಾಂಶುಪಾಲೆ ಶುಭ ಕೆ.ಎನ್ ಕಾರಂತರು ಕನ್ನಡ ಸಾಹಿತ್ಯ ಕಲೆ ಸಂಸ್ಕೃತಿ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಅಪಾರವಾದ ಕೊಡುಗೆಯನ್ನು ನೀಡಿದ ಮಹಾನ್ ವ್ಯಕ್ತಿತ್ವ. ವಿದ್ಯಾರ್ಥಿಗಳಿಗೆ ಅವರ ಚಿಂತನೆ ಆದರ್ಶನಗಳನ್ನು ಚಿತ್ರದ ಮೂಲಕ ಪರಿಚಯಿಸುವುದು ಅರ್ಥಪೂರ್ಣವಾದ ಪ್ರಯತ್ನವಾಗಿದೆ ಎಂದರು.

ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಮಾತನಾಡಿ, ಡಾ. ಶಿವರಾಮ ಕಾರಂತರು ಕನ್ನಡ ನಾಡು ಕಂಡ ಅಪರೂಪದ ಬಹುಮುಖ ಪ್ರತಿಭೆ. ಮಕ್ಕಳು ಚಿತ್ರಗಳ ಮೂಲಕ ಕಾರಂತರ ಮೌಲ್ಯಗಳನ್ನು ಅರಿಯುವ ಉತ್ತಮ ಅವಕಾಶವಾಗಿದೆ. ಕಾರಂತರ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು. ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ.ಚೇತನ್ ಶೆಟ್ಟಿ ಕೋವಾಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಟ್ರಸ್ಟಿನ ಸದಸ್ಯರಾದ ಡಾ.ಪ್ರಸಾದ್ ರಾವ್ ಸ್ವಾಗತಿಸಿ, ಡಾ.ಭಾರತಿ ಮರವಂತೆ ನಿರೂಪಿಸಿ, ಶಾಲೆಯ ಉಪನ್ಯಾಸಕ ಸುರೇಂದ್ರ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!