Friday, September 25, 2026
Friday, September 25, 2026

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

Date:

ಉಡುಪಿ, ಜು.2: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಕೋರ್ಸಿನ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ / ಪ.ವರ್ಗದ ಮತ್ತು ಇತರೆ ಜನಾಗಂಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ ಹಾಗೂ ದಾಖಲೆಗಳಿಗಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/ ಅನ್ನು ನೋಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ: 8050770004 ಅಥವಾ ಜಿಲ್ಲಾ/ತಾಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!