Friday, August 28, 2026
Friday, August 28, 2026

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Date:

ಉಡುಪಿ, ಜು.2: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸಂಧ್ಯಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ ಅವರು ಪದಗ್ರಹಣವನ್ನು ನೆರವೇರಿಸಿ, ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಸದಸ್ಯರಿಗೆ ನಿಯುಕ್ತಿ ಪತ್ರವನ್ನು ಹಸ್ತಾಂತರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಬೋಟ್ಯಾಡಿ ಮಾಹಿತಿ ನೀಡಿ ಶುಭ ಹಾರೈಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಜ್ಯೋತಿ ಉದಯ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಉಷಾ ಪ್ರಕಾಶ್ ಶೆಟ್ಟಿ, ಲಕ್ಷ್ಮೀ ಮಂಜುನಾಥ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕೊಡವೂರು, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್ ಸಹಿತ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಮಹಿಳಾ ಮೋರ್ಚಾ ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 359ಕ್ಕೆ ಏರಿಕೆ, 1300 ಕ್ಕೂ ಹೆಚ್ಚು ಜನರು ನಾಪತ್ತೆ

ಯು.ಬಿ.ಎನ್.ಡಿ., ಆ.27: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ...
error: Content is protected !!