Monday, October 19, 2026
Monday, October 19, 2026

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

ಉಡುಪಿ ಬ್ಲಾಕ್ ಕಾಂಗ್ರೆಸ್: ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ

Date:

ಉಡುಪಿ, ಜು.2: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಎಚ್ ಅಶೋಕ್, ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹಿರಿಯ ಲೆಕ್ಕ ಪರಿಶೋಧಕರಾದ ಯು.ಬಿ ಅಜಿತ್ ಕುಮಾರ್, ಪತ್ರಿಕಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕುರ್ಯ ಹಾಗೂ ರಾಷ್ಟ್ರೀಯ ಅಂಚೆ ಕಾರ್ಮಿಕರ ದಿನದ ಅಂಗವಾಗಿ ಅಂಚೆಪೇದೆಯಾದ ನಾಗರಾಜ್ ಶೆಟ್ಟಿಗಾರ್ ಅವರನ್ನು ಗುರುತಿಸಿ ಸಮಾಜಕ್ಕೆ ಅವರ ಕೊಡುಗೆಯನ್ನು ಸ್ಮರಿಸಿ ಅವರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕುರ್ಯ ಅವರು ಮಾತನಾಡಿ ಕಳೆದ 3 ದಶಕದಿಂದ ಪತ್ರಿಕೋದ್ಯಮದಲ್ಲಿ ಪಕ್ಷಾತೀತವಾಗಿ, ದ್ವೇಷದ ಮನೋಭಾವವನ್ನು ಇಟ್ಟುಕೊಳ್ಳದೇ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ. ಪತ್ರಕರ್ತರರು ವರದಿಗಾರಿಕೆಯ ಜವಾಬ್ದಾರಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿ ಸಾಮಾಜಿಕ ಜಾಲತಾಣದ ಭರಾಟೆಯ ನಡುವೆಯೂ ದಾಖಲೆಯುಕ್ತ ಪ್ರಬುದ್ಧ ವರದಿಗಾರಿಕೆಯ ಮೂಲಕ ಪತ್ರಿಕೋದ್ಯಮವು ತನ್ನ ಮಹತ್ವವನ್ನು ಉಳಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿ ಪತ್ರಿಕಾ ದಿನಾಚರಣೆಯಂದು ತನಗೆ ಗೌರವಿಸಿದಕ್ಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸೇರಿದಂತೆ ಉಪಸ್ಥಿತರಿದ್ದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಚಂದ್ರಮೋಹನ್ ಚಿಟ್ಪಾಡಿ, ಸತೀಶ್ ಪುತ್ರನ್, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಯುವರಾಜ್ ಪುತ್ತೂರು, ಸಂಧ್ಯಾ ತಿಲಕ್‌ರಾಜ್, ಮಮತಾ ಶೆಟ್ಟಿ, ಭರತ್ ಕುಮಾರ್, ಸಂಜಯ್ ಆಚಾರ್ಯ, ಲಕ್ಷ್ಮೀಶ್ ಶೆಟ್ಟಿ, ಲ್ಯಾನ್ಸಿ ಡಿ’ಸೋಜಾ, ಯಾದವ್ ಆಚಾರ್ಯ, ಅರ್ಚನಾ ದೇವಾಡಿಗ ಹಾಗೂ ಉದ್ಯಮಿ ಸಚಿನ್ ಅವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!