Tuesday, October 20, 2026
Tuesday, October 20, 2026

ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ದರ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯ ತಕ್ಷಣ ಕ್ರಮ ವಹಿಸಲು ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಜು.4: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ನೀಡುವ ನಿಟ್ಟಿನಲ್ಲಿ ಪ್ರತಿದಿನ ನೀಡುತ್ತಿರುವ ಮೊಟ್ಟೆಯ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆಯಲ್ಲಿ ವ್ಯತ್ಯಯವಾಗುತ್ತಿದ್ದು, ಈ ಬಗ್ಗೆ ತಕ್ಷಣ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಮೊಟ್ಟೆಯು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅಗತ್ಯವಾದ ಪ್ರೋಟೀನ್ ಮತ್ತು ಇತರೆ ಪೌಷ್ಟಿಕಾಂಶಗಳನ್ನು ಒದಗಿಸುವ ಪ್ರಮುಖ ಆಹಾರವಾಗಿದ್ದು, ಸರಕಾರವು ಶಾಲಾ ಮಕ್ಕಳಿಗೆ ಉಚಿತವಾಗಿ ಮೊಟ್ಟೆ ವಿತರಿಸುತ್ತಿರುವುದು ಅತ್ಯಂತ ಶ್ಲಾಘನಾರ್ಹ.

ರಾಜ್ಯ ಸರಕಾರವು ಮೊಟ್ಟೆಯೊಂದರ ಖರೀದಿಗೆ 6 ರೂಪಾಯಿಗಳಂತೆ ಶಾಲೆಗಳಿಗೆ ಬಿಡುಗಡೆ ಮಾಡುತ್ತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆಯು ಗಣನೀಯವಾಗಿ ಏರಿಕೆಯಾಗಿದ್ದು, ವಿದ್ಯಾರ್ಥಿಗಳಿಗಾಗಿ ಮುಖ್ಯ ಶಿಕ್ಷಕರು ರೂ. 10 ನೀಡಿ ಖರೀದಿಸುವಂತಾಗಿದೆ. ಇದರಿಂದ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವಲ್ಲಿ ಆರ್ಥಿಕವಾಗಿ ತೊಂದರೆಗಳು ಎದುರಾಗುತ್ತಿದ್ದು, ಪರಿಸ್ಥಿತಿ ಮುಂದುವರಿದರೆ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನಿರಂತರವಾಗಿ ಒದಗಿಸುವಲ್ಲಿ ಅಡಚಣೆ ಉಂಟಾಗುವ ಆತಂಕವಿದೆ.

ಆದುದರಿಂದ ಈ ಬಗ್ಗೆ ತುರ್ತಾಗಿ ಗಮನ ಹರಿಸಿ, ಸರಕಾರಿ ಶಾಲಾ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ಮಾರುಕಟ್ಟೆ ದರದಲ್ಲಿ ಮೊಟ್ಟೆ ಖರೀದಿಗೆ ಸೂಕ್ತ ಅವಕಾಶ ಕಲ್ಪಿಸಿ, ಸರಕಾರದ ಮಹತ್ತರ ಕಾರ್ಯಕ್ರಮವನ್ನು ನಿರಾತಂಕವಾಗಿ ಮುಂದುವರಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ, ಅ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಅ. 20: ಉಡುಪಿ ನಗರ ವ್ಯಾಪ್ತಿಯ ಮನೆ ಮನೆ ಕಸ ಸಂಗ್ರಹಣೆಯಲ್ಲಿ ವ್ಯತ್ಯಯ

ಉಡುಪಿ, ಅ. 20: ನವರಾತ್ರಿ ಆಯುಧ ಪೂಜೆಯ ಪ್ರಯುಕ್ತ ಅಕ್ಟೋಬರ್ 20...

ಉಚ್ಚಿಲ ದಸರಾ ಶೋಭಾಯಾತ್ರೆ: ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ, ಅ.20: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ...

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...
error: Content is protected !!