Friday, July 24, 2026
Friday, July 24, 2026

ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

Date:

ಉಡುಪಿ, ಜು.4: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅನ್ನು ಅಭಿವೃದ್ದಿ ಪಡಿಸಲಾಗಿದ್ದು, ಇಲಾಖೆಯ ಪ್ರೂಟ್ಸ್ ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2026-27” ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡು, ನಂತರ “ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ” ಆಯ್ಕೆಯನ್ನು ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಿ ಜನರೇಟ್ ಓ.ಟಿ.ಪಿ ಆಯ್ಕೆಯನ್ನು ಮಾಡಬೇಕು. ತದನಂತರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓ.ಟಿ.ಪಿ ಯನ್ನು ದಾಖಲಿಸಿದ್ದಲ್ಲಿ ರೈತರ ಎಫ್.ಐ.ಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್‌ಲೋಡ್ ಆಗುತ್ತದೆ. ಮುಂದಿನ ಹಂತದಲ್ಲಿ ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಬೇಕು. ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ಒಂದು ವೇಳೆ ರೈತರು ಎಫ್.ಐ.ಡಿ ಸಂಖ್ಯೆಯನ್ನು ಹೊಂದಿಲ್ಲದಿದ್ದಲ್ಲಿ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಪರ್ಕಿಸಿ ಎಫ್.ಐ.ಡಿ ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದಾಗಿದೆ.

ಬೆಳೆ ಸಮೀಕ್ಷೆ ಮಾಹಿತಿಯನ್ನು ಪೃಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುವುದು.

ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಸರ್ಕಾರದಿಂದ ಸುವರ್ಣಾವಕಾಶವನ್ನು ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ಜಿಲ್ಲೆಯ ರೈತರು ನಿಗದಿತ ಅವಧಿಯೊಳಗೆ ಮೊಬೈಲ್ ಆಪ್‌ನಲ್ಲಿ ತಮ್ಮ ಜಮೀನಿನ ಸರ್ವೆ ನಂಬರ್‌ ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು – 2026-27 ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟನೆ ತಿಳಿಸಿದೆ

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!