Wednesday, July 8, 2026
Wednesday, July 8, 2026

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

ಸಿದ್ಧಾಪುರ ಏತ ನೀರಾವರಿ ಯೋಜನೆ ಪುನರಾರಂಭಗೊಳಿಸಿ- ಸಚಿವರಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ

Date:

ಬೈಂದೂರು, ಜು.4: ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭೇಟಿ ಮಾಡಿ, ತಮ್ಮ ಕ್ಷೇತ್ರದ ವ್ಯಾಪ್ತಿಯ ಪ್ರಮುಖ ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಮನವಿ ಸಲ್ಲಿಸಿದರು.

ತುಂಗಾ ಏತ ನೀರಾವರಿ ಯೋಜನೆಯ ಆಧುನೀಕರಣ ಹಾಗೂ ಪ್ರವಾಹ ನಿಯಂತ್ರಣ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಮನವಿ ಸಲ್ಲಿಸಿದ ಸಂಸದರು, ಉಡುಗಣಿ-ತಾಳಗುಂದ ಸೇರಿದಂತೆ 8 ಪ್ರಮುಖ ಏತ ನೀರಾವರಿ ಯೋಜನೆಗಳ ಬಾಕಿ ವಿದ್ಯುತ್ ಬಿಲ್ ಪಾವತಿಗೆ ತುರ್ತು ಅನುದಾನ ಹಾಗೂ ನಿರಂತರ ವಿದ್ಯುತ್ ಸರಬರಾಜಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಬೈಂದೂರು ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಸಿದ್ಧಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಪುನರಾರಂಭಿಸಲು ಸಂಸದರು ಪ್ರತ್ಯೇಕ ಮನವಿ ನೀಡಿದ್ದಾರೆ.

ಮನವಿಗೆ ಸ್ಪಂದಿಸಿದ ಸಚಿವರು, ರಾಜ್ಯದ ಅನ್ನದಾತರ ಹಿತರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈ ಎಲ್ಲಾ ಬೇಡಿಕೆಗಳನ್ನು ಸಕಾರಾತ್ಮಕವಾಗಿ ಪರಿಗಣಿಸಲಾಗಿದ್ದು, ತಾಂತ್ರಿಕ ಹಾಗೂ ಆರ್ಥಿಕ ಸಾಧ್ಯತೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜು. 10: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಜು.7: ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್ ಎದುರಿನ...

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ

ಉಡುಪಿ, ಜು.7: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ...

ಸಿಎಂಎ ಯುಎಸ್ ಪರೀಕ್ಷೆ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಸುಮಂತ್ ಸಾಧನೆ

ಕುಂದಾಪುರ, ಜು.7: ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆಂಟ್ಸ್ ನಡೆಸಿದ ಸಿ.ಎಂ.ಎ. ಯುಎಸ್...

ಕೋಟದ ಪಂಚವರ್ಣ ಸಂಘಟನೆ ಕಛೇರಿ ಸ್ಥಳಾಂತರ

ಕೋಟ, ಜು.7: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ...
error: Content is protected !!