Monday, July 27, 2026
Monday, July 27, 2026

ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಶತಸಿದ್ಧ: ಯಶ್ಪಾಲ್ ಸುವರ್ಣ

ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಶತಸಿದ್ಧ: ಯಶ್ಪಾಲ್ ಸುವರ್ಣ

Date:

ಉಡುಪಿ, ಜು.6: ಉಡುಪಿಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಸಲುವಾಗಿ ಈಗಾಗಲೇ 30 ಎಕರೆ ಜಾಗವನ್ನು ಗುರುತಿಸಿ ಪಹಣಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣವಾಗುವುದು ಶತಸಿದ್ಧ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಅವರು ಕರ್ನಾಟಕ ಸ್ಟೇಟ್ ಮೆಡಿಕಲ್ ಅಂಡ್ ಸೇಲ್ಸ್ ರೆಪ್ರೆಸೆಂಟೇಟಿವ್ ಅಸೋಸಿಯೇಷನ್ ಉಡುಪಿ ಮತ್ತು ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಪುರಭವನದಲ್ಲಿ ಜುಲೈ 4ರಂದು ನಡೆದ 24ನೇ ವರ್ಷದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆರೋಗ್ಯ ವಲಯದಲ್ಲಿ ಹಲವಾರು ಸುಧಾರಣೆಗಳ ಅಗತ್ಯವಿದೆ ಈ ನಿಟ್ಟಿನಲ್ಲಿ ಆರೋಗ್ಯ ಸಚಿವರೊಂದಿಗೆ ಚರ್ಚಿಸುದಾಗಿ ತಿಳಿಸಿದ ಅವರು, ಉಡುಪಿ ಜಿಲ್ಲಾ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮುಂದಿನ ಆರು ತಿಂಗಳ ಒಳಗೆ ಹೊಸ ರೂಪ ನೀಡುವುದಾಗಿ ತಿಳಿಸಿದರು. ಉಡುಪಿ ಜಿಲ್ಲೆಯು ಅತ್ಯಂತ ಹೆಚ್ಚು ವೈದ್ಯರನ್ನು ನೀಡುತ್ತಿರುವ ಜಿಲ್ಲೆಯಾಗಿದ್ದು ವೈದ್ಯರ ಸಮಸ್ಯೆಗಳ ಪರಿಹಾರದ ಕುರಿತು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಮುಖ್ಯ ಅತಿಥಿ ಐಎಂಎ ಉಡುಪಿ ಕರಾವಳಿ ಅಧ್ಯಕ್ಷ ಡಾ. ಅಶೋಕ್ ಕುಮಾರ್, ವೈದ್ಯರು ತಮ್ಮ ವೈಯಕ್ತಿಕ ಸಮಯವನ್ನು ತ್ಯಾಗ ಮಾಡಿ ಜನರ ಆರೋಗ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ, ಆದರೆ ಕಳೆದ ಹಲವಾರು ವರ್ಷಗಳಿಂದ ವೈದ್ಯರ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಸೇರಿದಂತೆ ಹಲವಾರು ತೊಂದರೆಗಳು ವೈದ್ಯರ ಮಾನಸಿಕ ಸ್ಥಿತಿಯನ್ನು ತಲ್ಲಣಗೊಳಿಸಿದೆ, ಈ ನಿಟ್ಟಿನಲ್ಲಿ ಸಮಾಜದ ಪ್ರೇರಣೆ ಬೇಕಾಗಿದೆ ಎಂದರು. ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್ ವೈದ್ಯಕೀಯ ಪ್ರತಿನಿಧಿ ಸಂಘದ ಅಧ್ಯಕ್ಷ ಸತೀಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕಾರಂತ್, ಜಯಂಟ್ಸ್ ಫೆಡರೇಶನ್ ಯೂನಿಟ್ ಡೈರೆಕ್ಟರ್ ಸುಂದರ್ ಪೂಜಾರಿ ಮುಡುಕುಕ್ಕುಡೆ , ಮಿಲ್ಟನ್ ಒಲಿವೇರ, ಫೆಡರೇಷನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಮುಂತಾದವರು ಉಪಸ್ಥಿತರಿದ್ದರು. ಹಿರಿಯ ವೈದ್ಯರಾಗಿ ಸಮಾಜದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಕೆಎಂಸಿ ಮಣಿಪಾಲದ ಡಾ. ಸುರೇಶ್ ಪಿಲೈ, ಕುಂದಾಪುರ ಹಿರಿಯ ಸ್ತ್ರೀರೋಗ ತಜ್ಞರಾದ ಡಾ. ಭವಾನಿ ರಾವ್, ಮಲ್ಪೆಯ ಡಾ. ರಾಮಚಂದ್ರ ದೇವಾಡಿಗ, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಎ.ಜಿ ಮುಂತಾದವರನ್ನು ಗೌರವಿಸಲಾಯಿತು.

ಸುಬ್ರಹ್ಮಣ್ಯ ಆಚಾರ್ಯ, ವಿಜೇತ, ಶ್ರೇಯಸ್ ಆಚಾರ್, ಧ್ರುವ ಹೇರಳೆ, ಅನಂತ ಕೃಷ್ಣ ಹೊಳ್ಳ ಪರಿಚಯಿಸಿದರು. ಮಧುಸೂದನ್ ಹೇರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸನ್ನ ಕಾರಂತ್ ವಂದಿಸಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ಅಗಲಿದ ವೈದ್ಯರಿಗೆ ಮತ್ತು ವೈದ್ಯಕೀಯ ಪ್ರತಿನಿಧಿಗಳಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕಾರ್ಯಕ್ರಮಕ್ಕೆ ಸಹಕರಿಸಿದ ಸಂಸ್ಥೆಗಳನ್ನು ಗುರುತಿಸಲಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!