Monday, July 27, 2026
Monday, July 27, 2026

ಬೈರಂಪಳ್ಳಿ: ಜನಸಂಪರ್ಕ ಸಭೆ; ವಿವಿಧ ಸವಲತ್ತು ವಿತರಣೆ

ಬೈರಂಪಳ್ಳಿ: ಜನಸಂಪರ್ಕ ಸಭೆ; ವಿವಿಧ ಸವಲತ್ತು ವಿತರಣೆ

Date:

ಬೈರಂಪಳ್ಳಿ, ಜು.6: ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಮ್ಮುಖದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅರ್ಹ 12 ಫಲಾನುಭವಿಗಳಿಗೆ ಮಂಜೂರಾದ ಸುಕನ್ಯ ಸಮೃದ್ಧಿ ಬಾಂಡ್ ಹಾಗೂ ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ ವಿವಿಧ ಫಲಾನುಭವಿಗಳಿಗೆ ವೈದ್ಯಕೀಯ, ಶಿಕ್ಷಣ, ಕ್ರೀಡೆ ಶವ ಸಂಸ್ಕಾರಕ್ಕೆ ಚಕ್ ವಿತರಣೆ ಮಾಡಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ 30 ಲಕ್ಷ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ವಿಜಯ, ಪಂಚಾಯತ್ ಆಡಳಿತಾಧಿಕಾರಿ ಸೋಮನಾಥ್, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ವಿರೂಪಾಕ್ಷ ಕುಲಕರ್ಣಿ ಹಾಗೂ ಬೈರಂಪಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು ಹೆಮ್ಮೆಯ ಕ್ಷಣ: ಕಾರ್ಗಿಲ್ ಯೋಧ ಅನಂತಪದ್ಮನಾಭ ನಾಯಕ್

ಶಿರ್ವ, ಜು.26: 1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತ ದೇಶದ ಪರವಾಗಿ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ: ಸಿದ್ದರಾಮಯ್ಯ

ಬೆಂಗಳೂರು, ಜು.26: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ದೇಶದ ಎಚ್ಚೆತ್ತ ಯುವಜನರ ಗೆಲುವಾಗಿದೆ....
error: Content is protected !!