Sunday, September 27, 2026
Sunday, September 27, 2026

ತೆಂಕನಿಡಿಯೂರು ಕಾಲೇಜಿನಲ್ಲಿ ಎಸ್.ಐ.ಆರ್ ಮಾಹಿತಿ; ಜಾಥಾ ಕಾರ್ಯಕ್ರಮ

ತೆಂಕನಿಡಿಯೂರು ಕಾಲೇಜಿನಲ್ಲಿ ಎಸ್.ಐ.ಆರ್ ಮಾಹಿತಿ; ಜಾಥಾ ಕಾರ್ಯಕ್ರಮ

Date:

ತೆಂಕನಿಡಿಯೂರು, ಜು.6: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇಲ್ಲಿನ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಎಸ್.ಐ.ಆರ್ ಜಾಗೃತಿಯ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಯಿತು. ಎಸ್‌ಐಆರ್‌ ಕುರಿತಾದ ಮಾಹಿತಿ ಉಪನ್ಯಾಸವನ್ನು ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕರಾದ ಪ್ರಶಾಂತ್ ಎನ್ ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ನೀಡಿದರು. ಪ್ರಾoಶುಪಾಲರಾದ ನಿತ್ಯಾನಂದ ವಿ ಗಾವಂಕರ್ ಎಸ್.ಐ.ಆರ್ ಕುರಿತಾದ ಮಾಹಿತಿಯನ್ನು ತಮ್ಮ ಕುಟುಂಬ ನೆರೆಹೊರೆ ಮತ್ತು ಗ್ರಾಮದಲ್ಲಿ ಹಂಚಿಕೊಂಡು ತಾವು ಜಾಗೃತರಾಗುವ ಜೊತೆಗೆ ಸಮಾಜವನ್ನೂ ಜಾಗೃತ ಗೊಳಿಸಬೇಕೆಂದರು. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶೃತಿ ಬಿ ಎಸ್, ಛಾಯಾ, ಶ್ರೀಕಾಂತ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಜಾಥಾ ಹಾಗೂ ಸಕ್ಷರತಾ ಕ್ಲಬ್ ಸದಸ್ಯರಿಂದ ಕಾಲೇಜಿನ ಅಸುಪಾಸಿನ ಮನೆಗಳಿಗೆ ಭೇಟಿ ನೀಡಿ ಎಸ್.ಐ.ಆರ್ ಕುರಿತಾದ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು ಹಾಗೂ ಗಣ್ಯ ವ್ಯಕ್ತಿಗಳ ಮನೆಗೆ ಭೇಟಿ ನೀಡುವ ಅಂಗವಾಗಿ ನಿವೃತ್ತ ಶಿಕ್ಷಕರಾದ ಚಿಕ್ಕಣ್ಣ ಮಾಸ್ಟರ್‌ ಹಾಗೂ ಸೇಸು ಟೀಚರ್‌ ದಂಪತಿಗಳಲ್ಲಿ ಎಸ್.ಐ.ಆರ್ ಅಭಿಯಾನವನ್ನು ಪ್ರೋತ್ಸಾಹಿಸುವಂತೆ ಕೋರಲಾಯಿತು. ಮತದಾರರ ಸಾಕ್ಷರತಾ ಕ್ಲಬ್‌ನ ಸಂಚಾಲಕರು ತೆಕ್ಕಟ್ಟೆ, ಬ್ರಹ್ಮಾವರ, ಉದ್ಯಾವರ ಪದವಿಪೂರ್ವ ಕಾಲೇಜುಗಳಲ್ಲಿ ಎಸ್‌ ಐಆರ್‌ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟಿರುತ್ತಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!