Sunday, September 27, 2026
Sunday, September 27, 2026

ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ಉಚಿತ ಉಪಕರಣ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

Date:

ಉಡುಪಿ, ಜು.6: ಗ್ರಾಮಾಂತರ ಕೈಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿ ಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಟ ರೂ.8,000/- ಮೊತ್ತದ ವಿದ್ಯುತ್‌ ಚಾಲಿತ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಜಿದಾರರು ಆನ್‌ಲೈನ್ ವೆಬ್‌ಸೈಟ್ udupi.nic.in

ನಲ್ಲಿ ನಮೂದಿಸಿದ ಲಿಂಕ್‌ನ ಮುಖಾಂತರ ಅರ್ಜಿಗಳನ್ನು ಭರ್ತಿ ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ದೃಢೀಕರಣದೊಂದಿಗೆ ಜುಲೈ 10 ರಿಂದ 30 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯ ಕುಶಲಕರ್ಮಿಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ. ಅರ್ಜಿದಾರರು ಆನ್‌ಲೈನ್ ಮುಖಾಂತರ ಸಲ್ಲಿಸಿದ ಅರ್ಜಿಯ ಮೂಲ ಪ್ರತಿಯನ್ನು ಉಪ ನಿರ್ದೇಶಕರು, ಗ್ರಾಮಾಂತರ ಕೈಗಾರಿಕೆ, “ಬಿ ಬ್ಲಾಕ್”, # ನಂ.207, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಕಛೇರಿಗೆ ತಪ್ಪದೇ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂ.ಸಂಖ್ಯೆ: 0820-2574915 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗ್ರಾಮಾಂತರ ಕೈಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!