Saturday, August 29, 2026
Saturday, August 29, 2026

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ- 7,40,582 ಗಣತಿ ನಮೂನೆಗಳ ವಿತರಣೆ

Date:

ಉಡುಪಿ, ಜು.7: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಕಾರ್ಯಕ್ರಮವು ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆಯ ಅಂಗವಾಗಿ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ) ಮನೆ ಮನೆಗೆ ಭೇಟಿ ನೀಡಿ, ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸುತ್ತಿದ್ದಾರೆ ಮತ್ತು ಸಂಗ್ರಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,63,876 ಎನ್ಯುಮರೇಷನ್ ಫಾರ್ಮ್ಗಳನ್ನು ಮುದ್ರಿಸಲಾಗಿದ್ದು, ಈವರೆಗೆ (ಜುಲೈ 7) 118-ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,81,451 ಮತದಾರರಿಗೆ, 119-ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 1,59,874 ಮತದಾರರಿಗೆ, 120-ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 1,31,693 ಮತದಾರರಿಗೆ, 121-ಕಾಪು ವಿಧಾನಸಭಾ ಕ್ಷೇತ್ರದಲ್ಲಿ 1,28,356 ಮತದಾರರಿಗೆ ಹಾಗೂ 122-ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 1,39,208 ಮತದಾರರಿಗೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 7,40,582 ಮತದಾರರಿಗೆ ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿರುತ್ತದೆ.

39,469 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಲಾಗಿದ್ದು, 282 ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಕಂಡುಬಂದಿರುತ್ತದೆ. 154 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 45 ಮತದಾರರು ತಮ್ಮ ದಾಖಲಾತಿ ಮಾಡಿರುತ್ತಾರೆ. ಸಾರ್ವಜನಿಕರು ಆನ್‌ಲೈನ್ ಮೂಲಕವೂ ತಮ್ಮ ವಿವರಗಳನ್ನು ಭರ್ತಿ ಮಾಡಬಹುದು ಅಥವಾ ನವೀಕರಿಸಿಕೊಳ್ಳಬಹುದಾಗಿದ್ದು, ಅರ್ಹ ಮತದಾರರು ವೋಟರ್ ಸರ್ವೀಸ್ ಪೋರ್ಟಲ್ (ವಿ.ಎಸ್.ಪಿ) http://voters.eci.gov.in/ ಅಥವಾ ವೋಟರ್ ಹೆಲ್ಪ್ಲೈನ್ ಆಪ್ https://play.google.com/store/apps/details?id=com.eci.citizeಟಿ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!