Tuesday, September 29, 2026
Tuesday, September 29, 2026

ಪಂಚವರ್ಣ: ‘ಆಸಾಡಿ ಒಡ್ರ್’ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಚವರ್ಣ: ‘ಆಸಾಡಿ ಒಡ್ರ್’ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಕೋಟ, ಜು.12: ಒಂದು ಭಾಷೆ ಮತ್ತು ಬದುಕು ಊರುಕೇರಿಗಳನ್ನು ಗುರುತಿಸಬಲ್ಲದು, ಅದೇ ರೀತಿ ಕುಂದಾಪ್ರ ಕನ್ನಡ ಜನತೆಯನ್ನು ಭಾಷೆಯ ಜೊತೆ ಬದುಕಿನ ಪರಿ ವಿಶ್ವದೆಲ್ಲೆಡೆ ಗುರುತಿಸಿಕೊಂಡಿದೆ ಎಂದು ಕೋಟ ಅಮೃತೇಶ್ವರೀ ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಶನಿವಾರ ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಅಗಸ್ಟ್ ೯ ರಂದು ಮಣೂರು ಪರಿಸರದಲ್ಲಿ ನಡೆಯಲಿರುವ ಆಸಾಡಿ ಒಡ್ರ್ ಊರ್ ಕೇರಿ ಬದ್ಕಿನ ಹಬ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಶುಭ ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಾರ್ಯದರ್ಶಿ ರಷಿರಾಜ್ ಸಾಸ್ತಾನ, ಪಂಚವರ್ಣ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಸ್ನೇಹಕೂಟದ ವಿಜಯಲಕ್ಷ್ಮಿ ಭಟ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಉಪಸ್ಥಿತರಿದ್ದರು. ಪಂಚವರ್ಣ ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!