Friday, September 18, 2026
Friday, September 18, 2026

ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು

ಮಕ್ಕಳಿಗೆ ಪೋಷಕರೇ ನಿಜವಾದ ರೋಲ್ ಮಾಡೆಲ್ ಆಗಬೇಕು: ರಾಘವೇಂದ್ರ ಪ್ರಭು ಕರ್ವಾಲು

Date:

ಉಡುಪಿ, ಜು.12: ಪೋಷಕರು ತಮ್ಮ ಮಕ್ಕಳಿಗೆ ರೋಲ್ ಮಾಡೆಲ್ ಆಗಬೇಕಾಗಿದೆ ಎಂದು ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪೋಷಕರು ಮತ್ತು ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು. ಮಕ್ಕಳಿಗೆ ಪೋಷಕರು ಎಳವೆಯಲ್ಲಿ ಉತ್ತಮ ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಹೇಳಿ ಕೊಡಬೇಕು. ಇತ್ತೀಚಿಗಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ದೂರವಾಗುತ್ತಿವೆ, ವೃದ್ಧಾಶ್ರಮಗಳು ಹೆಚ್ಚಾಗುತ್ತಿರುವುದು ಇದಕ್ಕೆ ಸ್ಪಷ್ಟ ನಿದರ್ಶನ ಎಂದು ಹೇಳಿದ ಅವರು, ಕ್ರಿಶ್ಚಿಯನ್ ಹೈಸ್ಕೂಲು ಶತಮಾನ ಕಂಡ ಈ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದ ಜಿಲ್ಲೆಯ ಶ್ರೇಷ್ಠ ಸಂಸ್ಥೆ ಎಂದರು.

ಶಾಲಾ ಸಂಚಾಲಕ ಐವನ್ ಡಿ ಸೋನ್ಸ್ ಮಾತನಾಡಿ, ಶಾಲೆಯು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕುರಿತು ಶಾಲೆಗೆ ಬರುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಹೆಲೆನ್ ಸಾಲಿನ್ಸ್ ಶಾಲೆಯ ವಿವಿಧ ಚಟುವಟಿಕೆಯ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಪಿಟಿಎ ಅಧ್ಯಕ್ಷ ಸುನಿಲ್, ಉಪಾಧ್ಯಕ್ಷೆ ಶಾಂಭವಿ ಭಂಡಾರ್ಕರ್, ಕೋಶಾಧಿಕಾರಿ ಶಾನವಾಜ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮುಜರಾಯಿ ಸಚಿವ ಕೆ ಎಸ್ ಬಸವಂತಪ್ಪ ಕೊಡವೂರು ದೇವಳಕ್ಕೆ ಭೇಟಿ

ಉಡುಪಿ, ಸೆ.16: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ...

ವಿಶ್ವ ಪ್ರಥಮ ಚಿಕಿತ್ಸಾ ದಿನಾಚರಣೆ

ಮಂಗಳೂರು, ಸೆ.16: ರಥಬೀದಿಯ ಡಾ. ಪಿ. ದಯಾನಂದ ಪೈ–ಪಿ. ಸತೀಶ ಪೈ...

ಸಿದ್ಧಾಂತ್ ಫೌಂಡೇಶನ್ ವತಿಯಿಂದ ಬೋಧನೆಯಲ್ಲಿ ಕೃತಕ ಬುದ್ದಿ ಮತ್ತೆಯ ತರಬೇತಿ

ಮಂಗಳೂರು, ಸೆ.16: ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸತನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸಿದ್ಧಾಂತ್ ಫೌಂಡೇಶನ್...

ಮಲ್ಪೆ- ಕರಾವಳಿ ಜಂಕ್ಷನ್ ಹೆದ್ದಾರಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.16: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ...
error: Content is protected !!