Thursday, September 24, 2026
Thursday, September 24, 2026

ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ಭೇಟಿ; ಯೋಜನೆಗಳಿಗೆ ಚಾಲನೆ

ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ಭೇಟಿ; ಯೋಜನೆಗಳಿಗೆ ಚಾಲನೆ

Date:

ಉಡುಪಿ, ಜು.13: ಉಡುಪಿ ಜೆಸಿಐ ಭಾರತ ವಲಯ 15 ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ರವರು ಅಧಿಕೃತ ಭೇಟಿ ನೀಡಿ ಅನೇಕ ಶಾಶ್ವತ ಯೋಜನೆಗಳಿಗೆ ಚಾಲನೆ ನೀಡಿದರು. ಇಂದಿರಾನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 12 ಆದಿತ್ಯವಾರದಂದು ನಡೆದ ಕಾರ್ಯಕ್ರಮದಲ್ಲಿ ಇಂದಿರಾನಗರ ಶಾಲೆಗೆ ಕಲರ್ ಪ್ರಿಂಟರ್, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಕಟಪಾಡಿ ಪ್ರಯೋಜಕತ್ವದಲ್ಲಿ ಕಾಪು ಕಾಳಿಕಾಂಬ ದೇವಸ್ಥಾನ ಭವನಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ಅದೇ ರೀತಿ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವಿಶೇಷ ಬಾಟಲಗಳನ್ನು ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಜೆಸಿಐ ನಿರ್ದಿಷ್ಟ ಬೇಡಿಕೆಗೆ ಅನುಗುಣವಾಗಿ ಮತ್ತು ಅತ್ಯಂತ ಅಗತ್ಯವಾದ ವಿವಿಧ ಯೋಜನೆಗಳನ್ನು ನೀಡುತ್ತಿದೆ. ಹೀಗಾಗಿ ಯೋಜನೆಗಳು ಜನರ ಮೆಚ್ಚುಗೆಗೆ ಪಾತ್ರವಾಗಿದೆ ಜೇಸಿಐ ಉಡುಪಿ ಸಿಟಿ ಅನೇಕ ಉತ್ತಮ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅಭಿನಂದನೀಯ ಎಂದರು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು ವಹಿಸಿದ್ದರು. ವೇದಿಕೆಯಲ್ಲಿ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ, ಆಡಳಿತ ವಿಭಾಗ ನಿರ್ದೇಶಕ ಸುಹಾಸ್ ಮರಿಕೆ,ವಲಯ ಉಪಾಧ್ಯಕ್ಷೆ ಡಾ.ಹರಿಣಾಕ್ಷಿ ಕರ್ಕೇರ, ಪದಾಧಿಕಾರಿಗಳಾದ ಶೀರಾಜ್ ಆಚಾರ್ಯ, ಸಮಿಯಾ ಹೆಗ್ಡೆ, ಕಾರ್ಯಕ್ರಮದ ನಿರ್ದೇಶಕ ಬಾಸುಮಾ ಕೊಡಗು, ಕಾವ್ಯವಾಣಿ ಕೊಡಗು, ಪೂರ್ವ ಅಧ್ಯಕ್ಷರಾದ ಸಂದೀಪ್ ಕುಮಾರ್, ಉದಯ್ ನಾಯ್ಕ್, ಜಗದೀಶ್ ಶೆಟ್ಟಿ ಕೀಳಂಜೆ, ರಾಘವೇಂದ್ರ ಕರ್ವಾಲು, ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅಧ್ಯಕ್ಷರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ವಲಯ ಅಧಿಕಾರಿಗಳು ಜೆಸಿಐ ಉಡುಪಿ ಸಿಟಿ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು, ವನಸುಮ ಟ್ರಸ್ಟ್ ಇದರ ಸರ್ವ ಸದಸ್ಯರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!