Friday, September 25, 2026
Friday, September 25, 2026

ಇಂದಿರಾನಗರ: ಕಾನೂನು ಅರಿವು ಕಾರ್ಯಕ್ರಮ

ಇಂದಿರಾನಗರ: ಕಾನೂನು ಅರಿವು ಕಾರ್ಯಕ್ರಮ

Date:

ಉಡುಪಿ, ಜು.13: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ, ಇಂದಿರಾ ನಗರ, ಉಡುಪಿ ಇವರ ಸಹಯೋಗದಲ್ಲಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಸುನೀಲ ತಿ ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಅರಿವು ಮೂಡಿಸಿದರು. ಮುಖ್ಯ ಅತಿಥಿಗಳಾಗಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಗಿರೀಶ್ ಎ ನಾಯ್ಕ, ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮಂಗಲಾ, ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರಾದ ಪ್ರೇಮಾನಂದ ಶೆಟ್ಟಿಗಾರ್ ಮತ್ತು ಪ್ರಕಾಶ್ ಭಟ್ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಥಬೀದಿ ಕಾಲೇಜು: ಕಾನೂನು ಅರಿವು ಕಾರ್ಯಕ್ರಮ

ಮಂಗಳೂರು, ಸೆ.25: ಡಾ. ಪಿ ದಯಾನಂದ ಪೈ ಪಿ ಸತೀಶ ಪೈ...

ಜನಸಾಮಾನ್ಯರ ವಾಹನಗಳ ಸುರಕ್ಷಿತ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಸೆ.25: ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಎಲ್ಲಾ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು...

ಆಯುರ್ವೇದ ಜೀವನದ ಪದ್ದತಿಯಾದಾಗ ಬದುಕು ಸುಂದರ: ಎಂ.ಎ. ಗಫೂರ್

ಉಡುಪಿ, ಸೆ.25: ಆಯುರ್ವೇದ ಕೇವಲ ಒಂದು ವೈದ್ಯಕೀಯ ಪದ್ಧತಿಯಲ್ಲ, ಅದು ಜೀವನ...
error: Content is protected !!