Sunday, October 25, 2026
Sunday, October 25, 2026

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ: 39.2 ಲಕ್ಷ ವಿದ್ಯಾರ್ಥಿವೇತನ ವಿತರಣೆ

ಉಡುಪಿ ಜ್ಞಾನಸುಧಾದಲ್ಲಿ ಪ್ರತಿಭಾ ಪುರಸ್ಕಾರ: 39.2 ಲಕ್ಷ ವಿದ್ಯಾರ್ಥಿವೇತನ ವಿತರಣೆ

Date:

ಉಡುಪಿ, ಜು.14: ಜ್ಞಾನಸುಧಾ ಶಿಕ್ಷಣ ಸಂಸ್ಥೆಯಿಂದ ಒಂದು ವರ್ಷಕ್ಕೆ 227 ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್.ಗೆ ಸೇರ್ಪಡೆಯಾಗಿರುವುದು ರಾಜ್ಯಕ್ಕೆ ಮಾತ್ರವಲ್ಲ ದೇಶಕ್ಕೆ ಮಾದರಿ. ಜ್ಞಾನಸುಧಾದಂತಹ ಒಂದು ಸಂಸ್ಥೆಯನ್ನು ಸೃಷ್ಟಿಮಾಡಲು ಯಾವ ಸರ್ಕಾರಕ್ಕೂ ಸಾಧ್ಯವಿಲ್ಲ. ಇಂತಹ ಸಂಸ್ಥೆಯನ್ನು ದೇಶಕ್ಕೆ ಕೊಡುಗೆಯಾಗಿ ನೀಡಿ ಬದುಕಿಗಿಂತ ದೇಶ ಮಿಗಿಲೆಂಬ ಡಾ. ಸುಧಾಕರ ಶೆಟ್ಟಿಯವರ ಗುಣ ಅಣುಕರಣೀಯ ಎಂದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದರು. ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಗಾಂಧಿ ಆಸ್ಪತ್ರೆ, ಉಡುಪಿ ಇದರ ಮೆಡಿಕಲ್ ಡೈರೆಕ್ಟರ್ ಆದ ಡಾ. ವ್ಯಾಸರಾಜ ತಂತ್ರಿ ಇವರು ಮಾತನಾಡಿ ಪ್ರತಿಭೆಯೊಂದಿಗೆ ಪರಿಶ್ರಮ ಮತ್ತು ಸಂಸ್ಕಾರ ಜೊತೆಯಾದಾಗ ಅದೊಂದು ಶಕ್ತಿಯಾಗಿ ಪರಿವರ್ತನೆಯಾಗುತ್ತದೆ. ವಿದ್ಯಾರ್ಥಿಗಳು ಬದುಕನ್ನು ರೂಪುಗೊಳಿಸಿಕೊಳ್ಳುವ ಈ ಕಾಲದಲ್ಲಿ ಪ್ರತಿಭಾ ಪುರಸ್ಕಾರ ಪ್ರೇರಣೆಯಾಗಲಿ. ಬೃಹತ್ ಗುರಿಯೊಂದಿಗೆ ಸತ್ಯದ ದಾರಿಯಲ್ಲಿ ಸಾಗಿ ಎಂದರು.

ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. “ವೈದ್ಯೋ ನಾರಾಯಣೋ ಹರಿ” ಎಂಬಂತೆ ಡಾ. ವ್ಯಾಸರಾಜ ತಂತ್ರಿಗಳು ಶ್ರೇಷ್ಠ ಕೈಂಕರ್ಯವನ್ನು ಮಾಡುತ್ತಿದ್ದಾರೆ ಅವರ ಬದುಕು ವಿದ್ಯಾರ್ಥಿಗಳಿಗೆ ಆದರ್ಶವಾಗಲಿ. ವಿದ್ಯಾರ್ಥಿಗಳು ತಮ್ಮ ಶ್ರಮದ ಹಿಂದೆ ತಂದೆ ತಾಯಿ ಶಿಕ್ಷಕರ ಶ್ರಮ ಅಡಗಿದೆ ಎಂಬುದನ್ನು ಅರಿತು ಬಾಳಿ ಎಂದರು.

ಈ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿ.ಯು.ಸಿ.ಯ ಸಾಧಕ ವಿದ್ಯಾರ್ಥಿಗಳಿಗೆ, ಉಸನ್ಯಾಸಕರುಗಳಿಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ 39 ಲಕ್ಷದ 20 ಸಾವಿರ ರೂಗಳ ಪ್ರೋತ್ಸಾಹಧನವನ್ನು ನೀಡಲಾಯಿತು.

ಉಡುಪಿ ಜ್ಞಾನಸುಧಾದ ಪ್ರಾಂಶುಪಾಲರಾಗಿರುವ ಶ್ರೀನಿಧಿ ಭಾಗವತ್, ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಅಜೆಕಾರು ಜ್ಞಾನಸುಧಾದ ಪ್ರಾಂಶುಪಾಲರಾದ ಸಂತೋಷ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಡೀನ್ ಅಕಾಡೆಮಿಕ್ಸ್ ಡಾ. ಮಿಥನ್ ಯು., ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ವಾಣಿ ಕೆ., ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಮೊದಲಾದವರು ಉಪಸ್ಥಿತರಿದ್ದರು. ಭೌತಶಾಸ್ತ್ರ ಉಪನ್ಯಾಸಕಿ ಜೋತ್ಸ್ನಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭೂತಾನ್‌ನ ಮೊಂಗಾರ್ ಜಿಲ್ಲೆಯಲ್ಲಿ ಭಾರತದ ಬೆಂಬಲದೊಂದಿಗೆ ಕೈಗೊಂಡ 15 ಸಮುದಾಯ ಯೋಜನೆಗಳ ಉದ್ಘಾಟನೆ

ನವದೆಹಲಿ, ಅ.24: ಭೂತಾನ್‌ನ ಪೂರ್ವ ಭಾಗದಲ್ಲಿರುವ ಮೊಂಗಾರ್ ಜಿಲ್ಲೆಯಲ್ಲಿ, ಭಾರತ ಸರ್ಕಾರದ...

ಭದ್ರತಾ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಸೌದಿ ಅರೇಬಿಯಾಕ್ಕೆ ಇಂಡಿಗೋ ವಿಮಾನಯಾನ ರದ್ದು

ನವದೆಹಲಿ, ಅ.24: ಸೌದಿ ಅರೇಬಿಯಾದ ನಾಲ್ಕು ನಗರಗಳಿಗೆ ಮತ್ತು ಅಲ್ಲಿಂದ ಬರುವ...

2ನೇ ಟಿ20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ; ಸರಣಿಯಲ್ಲಿ 2-0 ಮುನ್ನಡೆ

ಯು.ಬಿ.ಎನ್.ಡಿ., ಅ.24: ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ಶನಿವಾರ ನಡೆದ ಎರಡನೇ ಟಿ20...

ವಿವಿಧ ಜನಪರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಅ.24: ಉಡುಪಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿ...
error: Content is protected !!