Thursday, September 24, 2026
Thursday, September 24, 2026

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

ತ್ಯಾಜ್ಯ ನೀರು ವೈಜ್ಞಾನಿಕವಾಗಿ ಸಂಸ್ಕರಿಸಲು ನಗರಸಭೆ ಸೂಚನೆ

Date:

ಉಡುಪಿ, ಜು.14: ಉಡುಪಿ ನಗರಸಭಾ ವ್ಯಾಪ್ತಿಯ ವಿವಿಧ ವಾರ್ಡ್ಗಳ ವಸತಿ ಸಮುಚ್ಚಯ, ವಾಣಿಜ್ಯ ಮಳಿಗೆಗಳಿಂದ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗೆ ಹರಿಯಬಿಡುತ್ತಿರುವುದರಿಂದ, ಸಾರ್ವಜನಿಕರ ಆರೋಗ್ಯಕ್ಕೆ ಧಕ್ಕೆ ಹಾಗೂ ಪರಿಸರ ಮಾಲಿನ್ಯ ಉಂಟಾಗಿ ಡೆಂಗ್ಯೂ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಜೊತೆಗೆ ನಗರ ವ್ಯಾಪ್ತಿಯಲ್ಲಿ ಹರಿಯುವ ಇಂದ್ರಾಣಿ ನದಿಯ ನೀರು ಕಲುಷಿತಗೊಂಡಿರುತ್ತದೆ.

ಸಾರ್ವಜನಿಕರು ತಮ್ಮ ಮನೆ, ವಸತಿ ಸಮುಚ್ಚಯ ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಲೇಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ತ್ಯಾಜ್ಯ ನೀರನ್ನು ಸಂಸ್ಕರಿಸದೇ ಮಳೆ ನೀರಿನ ಚರಂಡಿಗೆ ಮತ್ತು ಇಂದ್ರಾಣಿ ನದಿಗೆ ಪೈಪ್ ಮೂಲಕ ನೇರವಾಗಿ ಬಿಡುತ್ತಿರುವವರು ಪೈಪ್ ಅನ್ನು ತೆರವುಗೊಳಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ನಗರಸಭೆ ವತಿಯಿಂದ ಜುಲೈ 18 ರಂದು ತೆರವುಗೊಳಿಸಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!