Sunday, August 30, 2026
Sunday, August 30, 2026

ಮಣಿಪಾಲ ಜ್ಞಾನಸುಧಾ ಪ್ರತಿಭಾ ಪುರಸ್ಕಾರ: 55.80 ಲಕ್ಷ ವಿದ್ಯಾರ್ಥಿವೇತನ ವಿತರಣೆ

ಮಣಿಪಾಲ ಜ್ಞಾನಸುಧಾ ಪ್ರತಿಭಾ ಪುರಸ್ಕಾರ: 55.80 ಲಕ್ಷ ವಿದ್ಯಾರ್ಥಿವೇತನ ವಿತರಣೆ

Date:

ಮಣಿಪಾಲ, ಜು.15: ಎಲ್ಲಿ ಶಿಸ್ತು ಇರುತ್ತದೆಯೋ ಅಲ್ಲಿ ಯಶಸ್ಸು ಇರುತ್ತದೆ. ಒಳ್ಳೆಯ ಕನಸನ್ನು ಕಾಣುವುದರೊಂದಿಗೆ ಕಠಿಣ ಪರಿಶ್ರಮ ಮುಖ್ಯ. ನಿಮ್ಮ ಶ್ರಮ, ವ್ಯಕ್ತಿತ್ವ ಉತ್ತಮವಾಗಿದ್ದರೆ ಸಮಾಜಕ್ಕೆ ನೀವು ಅದ್ಭುತವಾದ ಕೊಡೆಗೆಯನ್ನು ನೀಡುವ ವ್ಯಕ್ತಿಗಳಗುತ್ತೀರಿ. ಜೀವನದಲ್ಲಿ ಎಷ್ಟೇ ಎತ್ತರಕ್ಕೇರಿದರೂ ತಂದೆ-ತಾಯಿಗೆ ಒಳ್ಳೆಯ ಮಕ್ಕಳಾದರೆ ನೀವು ಉತ್ತರೋತ್ತರ ಅಭಿವೃದ್ಧಿ ಹೊಂದುತ್ತೀರಿ ಎಂದು ಜಿ.ಎಂ. ಎಜುಕೇಶನ್ ಟ್ರಸ್ಟ್ ಮತ್ತು ಜಿ.ಎಂ. ಗ್ಲೋಬಲ್ ಎಜುಕೇಶನಲ್ ಟ್ರಸ್ಟ್ನ ಚೇರ್ಮನ್ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬಡಗಬೆಟ್ಟು ಕ್ರೆಡಿಟ್ ಕೋ- ಒಪೆರೇಟಿವ್ ಸೊಸೈಟಿಯ ಅಧ್ಯಕ್ಷರಾದ ಇಂದ್ರಾಳಿ ಜಯಕರ್ ಶೆಟ್ಟಿ ಇವರು ಮಕ್ಕಳು ಉತ್ತಮ ಬದಲಾವಣೆಯೊಂದಿಗೆ ವ್ಯಕ್ತಿತ್ವ ವಿಕಸನ ಬೆಳೆಸಿಕೊಂಡು ತಂದೆ ತಾಯಿ ಹಾರೈಕೆ, ಗುರುಗಳ ಆಶೀರ್ವಾದದೊಂದಿಗೆ ಉತ್ತಮ ವ್ಯಕ್ತಿಯಾಗಲು ಸಾಧ್ಯ ಎಂಬ ಸ್ಫೂರ್ತಿದಾಯಕ ಮಾತುಗಳನ್ನಾಡಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ನೀಡುವ ಪ್ರತಿಭಾ ಪುರಸ್ಕಾರವನ್ನು ಪಡೆದ ಮಕ್ಕಳು ಮುಂದೆ ತಂದೆ ತಾಯಿಗೆ ಮತ್ತು ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳಾಗಿ ಜೀವನ ನಡೆಸಿದರೆ ಕೆರೆಯ ನೀರನ್ನು ಕೆರೆಗೆ ಚೆಲ್ಲಿ ಎಂಬ ಪರಿಕಲ್ಪನೆಗೊಂದು ಅರ್ಥ ಬರುತ್ತದೆ ಎಂದರು.

ದ್ವೀತಿಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಸಾಧಕ ವಿಧ್ಯಾರ್ಥಿಗಳಿಗೆ ಮತ್ತು ಪ್ರಥಮ ಪಿ.ಯು.ಸಿ ಯ ಸಾಧಕ ವಿದ್ಯಾರ್ಥಿಗಳಿಗೆ, ಉಪನ್ಯಾಸಕರುಗಳಿಗೆ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ನ ವತಿಯಿಂದ 55.80 ಲಕ್ಷ ರೂಗಳ ವಿದ್ಯಾರ್ಥಿವೇತನ ನೀಡಲಾಯಿತು. ಚೀನಾದಲ್ಲಿ ನಡೆದ 18ರ ವಯೋಮಿತಿಯ ವರ್ಲ್ಡ್ ಸ್ಕೂಲ್ ಗೇಮ್ಸ್ ನಲ್ಲಿ ಭಾರತೀಯ ವಾಲಿಬಾಲ್ ತಂಡವನ್ನು ಪ್ರತಿನಿಧಿಸಿದ ಕುಮಾರಿ ನೈಜ ರಾಜೇಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಕಾರ್ಕಳ ಜ್ಞಾನಸುಧಾದಲ್ಲಿ ನಡೆದ ಪ್ರಥಮ ಹಂತದ ಪ್ರತಿಭಾ ಪುರಸ್ಕಾರದಲ್ಲಿ 60.30 ಲಕ್ಷ ಮತ್ತು ಉಡುಪಿ ಜ್ಞಾನಸುಧಾದಲ್ಲಿ ನಡೆದ ದ್ವಿತೀಯ ಹಂತದ ಪ್ರತಿಭಾ ಪುರಸ್ಕಾರದಲ್ಲಿ 39.20 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ವಿತರಿಸಲಾಗಿತ್ತು

ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿಇಒ ದಿನೇಶ್ ಎಂ ಕೊಡವೂರು, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಉಪಪ್ರಾಂಶುಪಾಲೆಯಾಗಿರುವ ವಾಣಿ ಕೆ., ಉಪಪ್ರಾಂಶುಪಾಲರಾದ ರವಿ ಜಿ ಮತ್ತು ಹೇಮಂತ್ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾದ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ ಸ್ವಾಗತಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶಮಿತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!