Sunday, August 30, 2026
Sunday, August 30, 2026

ಎಸ್. ವಿ ಕಾಮರ್ಸ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

ಎಸ್. ವಿ ಕಾಮರ್ಸ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Date:

ಗಂಗೊಳ್ಳಿ, ಜು.19: ವಿದ್ಯಾರ್ಥಿ ದೆಸೆಯಲ್ಲಿಯೇ ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವುದು ಸಂತೋಷದ ಮತ್ತು ಅಭಿನಂದನೀಯ ಸಂಗತಿ. ಈ ನಿಟ್ಟಿನಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಗಂಗೊಳ್ಳಿಯ ಉದ್ಯಮಿ ಸೋಮನಾಥ ಮೇಸ್ತ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ನಡೆದ ಎಸ್‌.ವಿ ಕಾಮರ್ಸ್ ಕ್ಲಬ್ ನ ದ್ವಿತೀಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಶುಭಾ ಸಂಸನೆಗೈದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಆಶಾ ಸೌಂಡ್ಸ್ ಎಂಡ್ ಲೈಟ್ಸ್ ಮಾಲೀಕರಾದ ನಾರಾಯಣ ಖಾರ್ವಿ ಮತ್ತು ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷರಾದ ಜಿ ಗೋಪಾಲ ಪೂಜಾರಿ ಶುಭ ಹಾರೈಸಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ಅನಿಲ್, ಗಣೇಶ್, ಹರೀಶ್, ಮತ್ತು ಎಸ್.ಎಲ್.ಆರ್. ಎಂ ಘಟಕದ ವಿಜೇತ ಕೆ, ರಮೇಶ್, ಚಂದ್ರ, ಮೂಕಾಂಬಿಕಾ, ಹೇಮಾ, ಗೌರಿ ಮತ್ತು ಸುಶೀಲರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಜಿ ಗೋಪಾಲ ಪೂಜಾರಿ ಅವರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯದ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಮತ್ತು ವಿದ್ಯಾರ್ಥಿ ಪ್ರತಿನಿಧಿ ಅದಿತಿ ಎಸ್ ಖಾರ್ವಿ ಉಪಸ್ಥಿತರಿದ್ದರು. ಎಸ್ ವಿ ಕಾಮರ್ಸ್ ಕ್ಲಬ್ ನ ಸಂಯೋಜಕ ನರೇಂದ್ರ ಎಸ್ ಗಂಗೊಳ್ಳಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಲಕ್ಷ್ಮಿ ನಿಮಿತ ಸ್ವಾಗತಿಸಿದರು. ದೀಪಾಲಿ ಮತ್ತು ರಚಿತ್ ಖಾರ್ವಿ ಪ್ರಾರ್ಥಿಸಿದರು. ಆಯಿಶಾ ನಿಫಾ ಮತ್ತು ಕೀರ್ತನಾ ಪೂಜಾರಿ ನಿರೂಪಿಸಿ ಶಿವಾನಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!