ಕುಂದಾಪುರ, ಜು.19: ದೇಹದ ಆರೋಗ್ಯದಂತೆ ಮನಸ್ಸಿನ ಆರೋಗ್ಯವೂ ಬಹಳ ಮುಖ್ಯವಾಗಿದ್ದು, ಭಾವನೆಗಳನ್ನು ಹಂಚಿಕೊಳ್ಳುವುದರ ಮೂಲಕ ಮನಸ್ಸಿಗೆ ಆದ ಗಾಯವನ್ನು ಗುಣಪಡಿಸಿಕೊಳ್ಳಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸೌಜನ್ಯ ಶೆಟ್ಟಿ ತಿಳಿಸಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಐಕ್ಯೂಎಸಿ ಘಟಕ ಹಮ್ಮಿಕೊಂಡ ‘ಪ್ರೇರಣಾ’ ಶಿಬಿರದಲ್ಲಿ ‘ಮಾನಸಿಕ ಆರೋಗ್ಯ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಬೇರೆ ಬೇರೆ ವ್ಯಸನಗಳಿಂದ ಮುಕ್ತರಾಗಬೇಕು. ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಮುಖ್ಯವಾಗಿದ್ದು, ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕಾಲೇಜಿನ ಐಕ್ಯೂಎಸಿ ಸಂಯೋಜಕರಾದ ದೀಪಿಕಾ ಜಿ., ಐಕ್ಯೂಎಸಿ ಸಹ ಸಂಯೋಜಕರಾದ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಗಣಕಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ರಶ್ಮಿ ಗಾವಡಿ ಸ್ವಾಗತಿಸಿ, ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು. ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಜತ್ ಬಂಗೇರ ವಂದಿಸಿದರು.




By
ForthFocus™