Friday, October 2, 2026
Friday, October 2, 2026

ಕ್ರೀಡಾ ಇಲಾಖೆಯ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕ್ರೀಡಾ ಇಲಾಖೆಯ ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಜು.20: 2025 ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ, ನಗದು ಪುರಸ್ಕಾರ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, 2025-26 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ, 2025-26 ನೇ ಸಾಲಿನ ವಿದ್ಯಾರ್ಥಿ ವೇತನ ಯೋಜನೆ ಹಾಗೂ 2026-27 ನೇ ಸಾಲಿನ ಗುರಿ ಒಲಂಪಿಕ್ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಪ್ರಶಸ್ತಿ ಹಾಗೂ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, ಮೊ.ನಂ: 9845432303 ಅಥವಾ ಯುವ ಸಹಾಯವಾಣಿ ಸಂಖ್ಯೆ: 155265 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಏಷ್ಯನ್ ಗೇಮ್ಸ್: ಭಾರತದ ಪದಕ ಪಟ್ಟಿಗೆ 6 ಪದಕಗಳ ಸೇರ್ಪಡೆ

ಯು.ಬಿ.ಎನ್.ಡಿ., ಅ.1: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಇಂದು ಮತ್ತೊಂದು...

ವಿವಿಧ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಉಡುಪಿ, ಅ.1: ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ವಿವಿಧ ಸಚಿವಾಲಯ,...
error: Content is protected !!