Sunday, October 18, 2026
Sunday, October 18, 2026

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

Date:

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ ಸ್ಪೂರ್ತಿಯಾಗಿರುತ್ತದೆ. ದೈಹಿಕ ಶಿಕ್ಷಣ ಉಪನ್ಯಾಸಕರು ಈ ನಿಟ್ಟಿನಲ್ಲಿ ಕಾರ್ಯಪೃವೃತ್ತರಾಗಬೇಕು ಹಾಗೂ ಕ್ರೀಡಾ ಸಾಧಕರು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಿಸುವಂತಾಗಬೇಕು ಎಂದು ಅಜೆಕಾರು ಪದ್ಮ ಗೋಪಾಲ ಎಜ್ಯುಕೇಷನ್‌ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿ ಶುಭ ಹಾರೈಸಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ವಿದ್ಯಾ ನಗರದಲ್ಲಿ, ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ನಡೆದ ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ಉಡುಪಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾದ ರಮೇಶ್‌ ಕಾಂಚನ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಉಪನಿರ್ದೇಶಕರಾದ ರವೀಂದ್ರ ಉಪಾಧ್ಯ ಇವರು ಮುಂದೆ ಬರುವ ಕ್ರೀಡಾಕೂಟಗಳಿಗೆ ಇಲಾಖೆಯ ಸಂಪೂರ್ಣ ಬೆಂಬಲವಿರುವುದು ಎಂದು ಅಧ್ಯಕ್ಷೀಯ ನುಡಿಗಳನ್ನಾಡಿದರು. ರಾಷ್ಟ್ರೀಯ ಪಂದ್ಯಾಟ ಮತ್ತು ಕ್ರೀಡಾಕೂಟದಲ್ಲಿ ಭಾಗವಹಿಸಿದ ಸಾಧಕರಿಗೆ ಮತ್ತು ತರಬೇತುದಾರರಿಗೆ ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ವಿಭಾಗದ ನಿವೃತ್ತ ಉಪನಿರ್ದೇಶಕರಾದ ಮಾರುತಿ ಹಾಗೂ ಮಂಗಳೂರು ಉತ್ತರದ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಜೀವನ್‌ ಕುಮಾರ್‌ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಮಂಜುನಾಥ ಭಟ್‌, ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನರಹಿತ ಪ. ಪೂ.ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಯಾನಂದ ಪೈ, ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಿ.ಇ.ಒ ದಿನೇಶ್‌ ಎಮ್‌ ಕೊಡವೂರು, ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್‌ ಶೆಟ್ಟಿ, ಉಡುಪಿ ಜಿಲ್ಲಾ ಪ.ಪೂ. ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸತೀಶ್‌ ಹೆಗ್ಡೆ ಶಾನಾಡಿ, ಕ್ರೀಡಾ ಸಂಯೋಜಕರಾದ ದಿನೇಶ್‌ ಕುಮಾರ್‌ ಎ., ಕಾರ್ಯದರ್ಶಿ ಸುಕೇಶ್‌ ಶೆಟ್ಟಿ ಉಪಸ್ಥಿತರಿದ್ದರು. ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಶಮಿತ ಹಾಗೂ ಅಮೃತ ಭಾರತಿ ಕಾಲೇಜಿನ ವಿಜಯ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!