Thursday, September 24, 2026
Thursday, September 24, 2026

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

Date:

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆ ಹಾಗೂ ಪೂರಕ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹೇಳಿದರು. ಬೈಕಾಡಿ ದೇವಕಿ ಕನ್ವೆನ್ಷನ್ ಸಭಾಂಗಣದಲ್ಲಿ ಬ್ರಹ್ಮಾವರ ವಲಯದ ರಿಕ್ಷಾ ಚಾಲಕ ಮತ್ತು ಮಾಲಕರ ಕುಂದು ಕೊರತೆಗಳ ಬಗ್ಗೆ ಆಯೋಜಿಸಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬ್ರಹ್ಮಾವರ ಭಾಗದ ರಿಕ್ಷಾ ಚಾಲಕರ ಪ್ರಮುಖ ಬೇಡಿಕೆಗಳಾದ ದೂಪದಕಟ್ಟೆಯಿಂದ ಉಪ್ಪಿನಕೋಟೆ ವರೆಗಿನ ಸರ್ವಿಸ್ ರಸ್ತೆ ನಿರ್ಮಾಣ, ರಿಕ್ಷಾ ದರ ಪರಿಷ್ಕರಣೆ, ಸಿ. ಎನ್.ಜಿ. ನಿರಂತರ ಪೂರೈಕೆ, ತಾಲೂಕು ಕೇಂದ್ರವಾಗಿರುವ ಬ್ರಹ್ಮಾವರದಲ್ಲಿ ವಾರದಲ್ಲಿ ಒಂದು ದಿನ ಸಾರಿಗೆ ಇಲಾಖೆ ಸಂಬಂಧಿತ ಕೆಲಸಗಳಿಗಾಗಿ ಆರ್. ಟಿ. ಓ. ಕ್ಯಾಂಪ್, ರಿಕ್ಷಾ ನಿಲ್ದಾಣದಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಆದ್ಯತೆಯ ಮೇಲೆ ಪ್ರಯತ್ನಿಸುವ ಭರವಸೆ ನೀಡಿದರು.

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ ಮಾತನಾಡಿ ರಿಕ್ಷಾ ಚಾಲಕರ ಸಮಸ್ಯೆಗಳ ಬಗ್ಗೆ ಸದಾ ಸ್ಪಂದಿಸುವ ಶಾಸಕರು ಇದೀಗ ತಾವೇ ಮುತುವರ್ಜಿ ವಹಿಸಿ ರಿಕ್ಷಾ ಚಾಲಕರ ಕುಂದು ಕೊರತೆಗಳ ಬಗ್ಗೆ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿರುವುದು ಶ್ಲಾಘನೀಯ ಎಂದರು.

ರಿಕ್ಷಾ ಚಾಲಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಶಾಸಕರ ಕಾರ್ಯವೈಖರಿಗೆ ಪೂರಕವಾಗಿ ಅಗತ್ಯ ಸಂದರ್ಭದಲ್ಲಿ ರಿಕ್ಷಾ ಚಾಲಕರಿಗೆ ಉಚಿತವಾಗಿ ಕಾನೂನು ಸಲಹೆ ನೀಡಲು ಸದಾ ಸಿದ್ಧ ಎಂದು ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಹೇಳಿದರು. ಬ್ರಹ್ಮಾವರ ವಲಯದ ವಿವಿಧ ರಿಕ್ಷಾ ನಿಲ್ದಾಣದ ಸುಮಾರು 200 ಮಂದಿ ರಿಕ್ಷಾ ಚಾಲಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಬೇಡಿಕೆಗಳ ಬಗ್ಗೆ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ಉಡುಪಿಯ ಹಿರಿಯ ನ್ಯಾಯವಾದಿಗಳಾದ ಹರಿಮಕ್ಕಿ ರತ್ನಾಕರ ಶೆಟ್ಟಿ, ರಿಕ್ಷಾ ಚಾಲಕರ ಸಂಘದ ಮುಖಂಡರಾದ ಭಾಸ್ಕರ ಪೂಜಾರಿ, ಸೂರ್ಯ ಪೂಜಾರಿ ಆರೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ರಾಜೀವ್ ಕುಲಾಲ್ ಸ್ವಾಗತಿಸಿ, ಕಮಲಾಕ್ಷ ಹೆಬ್ಬಾರ್ ವಂದಿಸಿದರು. ಮನೋಜ್ ಶೆಟ್ಟಿ ಕಳ್ತೂರು ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!