Wednesday, September 23, 2026
Wednesday, September 23, 2026

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗಣ್ಯರ ಭೇಟಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗಣ್ಯರ ಭೇಟಿ

Date:

ಕಾಪು, ಜು.23: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್‌ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು ಜಿಲ್ಲಾ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್ (ವಾಸು), ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನ ರೆಡ್ಡಿ ಇವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಜೊತೆ ಜುಲೈ 23ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗಿಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ಮಾಧವ ಆರ್. ಪಾಲನ್, ಹುಬ್ಬಳ್ಳಿ ಧಾರವಾಡ ಸಮಿತಿಯ ಪ್ರಧಾನ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!