Friday, October 16, 2026
Friday, October 16, 2026

ಅಕ್ಕ ಕೆಫೆ ನಿರ್ವಹಣೆ: ಜು.28ಕ್ಕೆ ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

ಅಕ್ಕ ಕೆಫೆ ನಿರ್ವಹಣೆ: ಜು.28ಕ್ಕೆ ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

Date:

ಉಡುಪಿ, ಜು.22: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ನೂತನವಾಗಿ ಅಕ್ಕ ಕೆಫೆ ಪ್ರಾರಂಭಿಸಲು ಉದ್ದೇಶಿಸಿದ್ದು, ಕೆಫೆಯನ್ನು ಯಶಸ್ವಿಯಾಗಿ ನಿರ್ವಹಿಸುವ ಸಲುವಾಗಿ ಅರ್ಹ ಸ್ವ-ಸಹಾಯ ಗುಂಪುಗಳನ್ನು ಆಯ್ಕೆ ಮಾಡಲು ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಕಡ್ಡಾಯವಾಗಿ ಗ್ರಾಮೀಣ ಸಂಜೀವಿನಿ ಸ್ವ-ಸಹಾಯ ಗುಂಪುಗಳಾಗಿರುವ, ಹೋಟೆಲ್ ಅಥವಾ ಕ್ಯಾಟರಿಂಗ್ ಉದ್ಯಮದಲ್ಲಿ ಪೂರ್ವಾನ್ವಯ ಅನುಭವ ಹೊಂದಿರುವ ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸ್ವ-ಸಹಾಯ ಗುಂಪುಗಳು ತಾವು ತಯಾರಿಸುವ ಆಹಾರದ ಒಂದು ಮಾದರಿ ಮೆನು ಮತ್ತು ದರದ ಪಟ್ಟಿಯೊಂದಿಗೆ ಹಾಗೂ ತಮ್ಮ ಸಂಘದ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಅವಿನಾಶ್, ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್ ಉಡುಪಿ (ಸಂಜೀವಿನಿ ಯೋಜನೆ) ದೂರವಾಣಿ ಸಂಖ್ಯೆ: 9844234080 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...

ಸಂಸ್ಕೃತಿ ನಮ್ಮ ಗೌರವದ ಪ್ರತೀಕ: ಡಾ. ವೆಂಕಟರಾಮ್ ಭಟ್

ಉಡುಪಿ, ಅ.16: ಭಾರತೀಯ ಸಂಸ್ಕೃತಿಯ ಉಳಿವಿನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಪಾತ್ರ...
error: Content is protected !!