Friday, August 28, 2026
Friday, August 28, 2026

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

Date:

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಅನ್ವಯ ಕಾರ್ಮಿಕ ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ಉತ್ತರ ಪ್ರದೇಶ ಮೂಲದ ಓರ್ವ ಬಾಲ ಕಾರ್ಮಿಕನನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದರು. ಕಟ್ಟಡದ ಮಾಲೀಕರು/ನಿಯೋಜಕರು ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಅಥವಾ ಇನ್ಯಾವುದೇ ಕೆಲಸದಲ್ಲಿ ಬಾಲಕಾರ್ಮಿಕರನ್ನು ನೇಮಿಸಿಕೊಳ್ಳಬಾರದು. ಬೇರೆ ರಾಜ್ಯದಿಂದ ಕಾರ್ಮಿಕರನ್ನು ಕರೆ ತರುವಾಗ ಮೂಲ ದಾಖಲೆಯನ್ನು ಪರಿಶೀಲಿಸಿ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಹಾಗೂ ಮೇಲ್ಕಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಮಾಲೀಕರ ವಿರುದ್ಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಸಿ.ಎಚ್ ತಿಳಿಸಿದ್ದಾರೆ. ಉಡುಪಿ ಉಪವಿಭಾಗದ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್ ಇವರು, ಉಚಿತ ಮತ್ತು ಕಡ್ಡಾಯ ಶಿಕ್ಷಣ ಪ್ರತಿ ಮಗುವಿನ ಹಕ್ಕು ಹಾಗೂ ಅದನ್ನು ಪ್ರತಿ ಮಗು ದೊರಕಿಸುವುದು ಪ್ರತಿ ನಾಗರಿಕನ ಕರ್ತವ್ಯವಾಗಿರುತ್ತದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986ರ ಅನ್ವಯ ಎಲ್ಲ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ಯಮಿಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20,000/- ದಿಂದ ರೂ.50,000/- ಗಳವರೆಗೆ ದಂಡ ಅಥವಾ ಎರಡನ್ನು ವಿಧಿಸುವ ಅವಕಾಶವಿರುತ್ತದೆ ಹಾಗೂ ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಅಲ್ಲದೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸುವ ಪೋಷಕರಿಗೂ ಸಹ ಲಘು ಶಿಕ್ಷೆ ಪ್ರಾವಧಾನವಿದ್ದು, ಪುನರಾವರ್ತಿತ ಅಪರಾಧಕ್ಕೆ ರೂಪಾಯಿ ರೂ.10,000/- ಗಳ ದಂಡವನ್ನು ವಿಧಿಸಬಹುದಾಗಿದೆ.

ಕಾರ್ಕಳ ವೃತ್ತ ಕಾರ್ಮಿಕ ನಿರೀಕ್ಷಕ ನವೀನ್ ಸಿ.ಎಚ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕಿ ಅಮೃತ ಹಾಗೂ ಮಕ್ಕಳ ರಕ್ಷಣಾ ಘಟಕದ ಸಾಮಾಜಿಕ ಕಾರ್ಯಕರ್ತೆ ನಯನ ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!