Thursday, July 23, 2026
Thursday, July 23, 2026

ತ್ರಿಶಾ ಕ್ಲಾಸಸ್‌: ಸಿಎ ಫೈನಲ್, ಸಿಎ ಇಂಟರ್ ಮೀಡಿಯೆಟ್, ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ತ್ರಿಶಾ ಕ್ಲಾಸಸ್‌: ಸಿಎ ಫೈನಲ್, ಸಿಎ ಇಂಟರ್ ಮೀಡಿಯೆಟ್, ಸಿಎ ಫೌಂಡೇಷನ್ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Date:

ಕಟಪಾಡಿ, ಜು.23: ತ್ರಿಶಾ ಕ್ಲಾಸಸ್‌ ವತಿಯಿಂದ ಸಿಎ ಫೈನಲ್(19) , ಸಿಎ ಇಂಟರ್ ಮೀಡಿಯೆಟ್(21) , ಸಿಎ ಫೌಂಡೇಷನ್(80) ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಇತ್ತೀಚೆಗೆ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ಼ತೆ ವಹಿಸಿದ್ದ ತ್ರಿಶಾ ಸಂಸ್ಥೆ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್‌ ಅವರು, ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ನಿಮ್ಮ ಪ್ರೋತ್ಸಾಹಕ್ಕೆ ತ್ರಿಶಾ ಎಂದಿಗೂ ನಿಮ್ಮ ಜೊತೆ ಇದೆ ಎಂದು ಹೇಳಿದರು. ತ್ರಿಶಾ ಸಂಸ್ಥೆಯ ಟ್ರಸ್ಟಿಗಳಾದ ನಮಿತಾ ಜಿ ಭಟ್ ಹಾಗೂ ರಾಮ್ ಪ್ರಭು, ತ್ರಿಶಾ ಕಾಲೇಜ್ ಆಫ್‌ ಕಾಮರ್ಸ್‌ ಆ್ಯಂಡ್‌ ಮ್ಯಾನೇಜ್ಮೆಂಟ್ ನ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರೊ. ಕುಲದೀಪ್ ವೈ.ಯು, ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್, ತ್ರಿಶಾ ಕ್ಲಾಸಸ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸನ್ಮಾನಿಸಲ್ಪಡುವ ವಿದ್ಯಾರ್ಥಿಗಳ ಹೆಸರನ್ನು ಗೌರಿ ಕಾಮತ್ ವಾಚಿಸಿದರು. ಕಾರ್ಯಕ್ರಮವನ್ನು ಪ್ರಜ್ಞಾ ರಾವ್ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...

ಅಕ್ಕ ಕೆಫೆ ನಿರ್ವಹಣೆ: ಜು.28ಕ್ಕೆ ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ

ಉಡುಪಿ, ಜು.22: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಹಾಗೂ ಜಿಲ್ಲಾ ಪಂಚಾಯತ್...
error: Content is protected !!