Thursday, October 15, 2026
Thursday, October 15, 2026

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

Date:

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ, ಆ ಮೂಲಕ ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ ಎಂದು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ದ್ವಿತೀಯ ಮತ್ತು ತೃತೀಯ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಅಭಿವಿನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಆಡಳಿತಾತ್ಮಕ ವಿಚಾರಗಳನ್ನು ತಿಳಿಸಿದರು. ಶೈಕ್ಷಣಿಕ ನಿಕಾಯಕ ತಿಮ್ಮಪ್ಪ ಡಿ.ಎಸ್. ಶೈಕ್ಷಣಿಕ ವಿಷಯಗಳನ್ನು ಚರ್ಚಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ರೇವತಿ ಡಿ. ವಂದಿಸಿದರು. ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!