Sunday, October 18, 2026
Sunday, October 18, 2026

‘ರೂಮಿನೊಳಗಿಂದ’ ಬಿಡುಗಡೆ

‘ರೂಮಿನೊಳಗಿಂದ’ ಬಿಡುಗಡೆ

Date:

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ. ನಮ್ಮ ಹತ್ತಿರದಲ್ಲಿ ಇರುವ ಇಂತಹ ಯುವ ಲೇಖಕರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಸಮಾಜ ಮಾಡಬೇಕಿದೆ. ಎಂದು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‌.ವಿ ಕಾಮರ್ಸ್ ಕ್ಲಬ್ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ಆಶ್ರಯದಲ್ಲಿ ನಡೆದ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಏಳನೆಯ ಪುಸ್ತಕ ‘ರೂಮಿನೊಳಗಿಂದ’ ಕಥಾ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ. ಸಿ ಅಧ್ಯಕ್ಷತೆ ವಹಿಸಿದ್ದರು. ಲೇಖಕ ರಾಘವೇಂದ್ರ ಬಿಲ್ಲವ ಪುಸ್ತಕವನ್ನು ಪರಿಚಯಿಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಘವೇಂದ್ರ ದೇವಾಡಿಗ ಶುಭ ಹಾರೈಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ವಿದ್ಯಾರ್ಥಿ ಪ್ರತಿನಿಧಿ ಭಾವನಾ ಉಪಸ್ಥಿತರಿದ್ದರು. ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಸಾನಿಕ ಮತ್ತು ಐಶು ಪ್ರಾರ್ಥಿಸಿದರು. ನಿಸರ್ಗ ಅತಿಥಿಗಳನ್ನು ಸ್ವಾಗತಿಸಿದರು. ಪ್ರಾರ್ಥನಾ ಪೈ ನಿರೂಪಿಸಿದರು. ನವಮಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!