Sunday, October 18, 2026
Sunday, October 18, 2026

ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಪ್ರದಾನ ಸಮಾರಂಭ

ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಪ್ರದಾನ ಸಮಾರಂಭ

Date:

ಕೋಟ, ಜು.26: ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಸದಾ ಮುಂಚೂಣಿಗೆ ನಿಲ್ಲುತ್ತದೆ. ಹಾಗೆಯೇ ಯುವ ಸಮುದಾಯದ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು. ಭಾನುವಾರ ಸಾಲಿಗ್ರಾಮ ಚೇಂಪಿ ವಿಶ್ವಕರ್ಮ ಸಭಾಂಗಣದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಯ್ಕೆಗೊಂಡ ಜಿ. ತಿಮ್ಮ ಪೂಜಾರಿ ಅವರ ಪದಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಯೋಜನೆಗಳಾಗಿ ರೂಪುಗೊಂಡಿದೆ ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಈವರೆಗಿನ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿದರು.

ಮಾಜಿ ಸಚಿವ ವಿನಯ ಕುಮಾರ್ ಸೊರೆಕೆ ಮಾತನಾಡಿ, ದೇಶದ ಭವಿಷ್ಯ ರೂಪಿಸುವ ಯುವ ಸಮುದಾಯಕ್ಕೆ ಕೇಂದ್ರ ಸರಕಾರ ಅನ್ಯಾಯವೆಸೆಗಿದೆ ಎಂದರು. ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ನೂತನ ಅಧ್ಯಕ್ಷ ಜಿ.ತಿಮ್ಮ ಪೂಜಾರಿಯವರಿಗೆ ಅಧಿಕಾರ ಹಸ್ತಾಂತರಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧ್ಯಕ್ಷತೆ ವಹಿಸಿದ್ದರು. ಕೆ.ಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಕೆ.ಪಿ.ಸಿ.ಸಿ. ವಕ್ತಾರರಾದ ಸುಧೀರ್ ಕುಮಾರ್ ಮರೋಳಿ, ರಾಜ್ಯ ಉಸ್ತುವಾರಿ ಹೇಮಂತ್ ಸಿಂಗ್ ಪಟೇಲ್, ಕೇಂದ್ರ ಸರಕಾರದ ಧೋರಣೆ ಹಾಗೂ ರಾಜ್ಯ ಸರಕಾರದ ಜನಪರ ಯೋಜನೆ, ಪಕ್ಷ ಬಲವರ್ಧನೆ ಕುರಿತು ಮಾತನಾಡಿದರು.

ಶಂಕರ್ ಕುಂದರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೈಂದೂರು ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ಮೊಳಹಳ್ಳಿ ದಿನೇಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜ್ಯೋತಿ ಹೆಬ್ಬಾರ್, ಜಯಕುಮಾರ್, ಎಸ್ ರಾಜು ಪೂಜಾರಿ, ವಿಕಾಸ್ ಹೆಗ್ಡೆ, ಭುಜಂಗ ಶೆಟ್ಟಿ, ರೋಶನ್ ಕುಮಾರ್ ಶೆಟ್ಟಿ, ಇಚ್ಚಿತಾರ್ಥ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ರಮೇಶ್ ಶೆಟ್ಟಿ, ಶ್ರೀನಿವಾಸ್ ಅಮೀನ್, ನಿರೀಕ್ಷಾ ಮೆಂಡನ್, ಹೇರೂರು ಸದಾನಂದ ಶೆಟ್ಟಿ, ಪ್ರಕಾಶ್ಚಂದ್ರ ಶೆಟ್ಟಿ, ಚಂದ್ರಶೇಖರ ಮೆಂಡನ್, ಕೃಷ್ಣಪ್ರಸಾದ್, ಅಶೋಕ್ ಪೂಜಾರಿ ಬೀಜಾಡಿ, ರಮೇಶ್ ಕಾಂಚನ್, ಮಲ್ಯಾಡಿ ಶಿವರಾಮ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರೇಖಾ ಸುವರ್ಣ ಸೇರಿದಂತೆ ಪಕ್ಷದ ಅನೇಕರು ಉಪಸ್ಥಿತರಿದ್ದರು. ಗ್ಯಾರಂಟಿ ಸಮಿತಿಯ ತಾಲೂಕು ಅಧ್ಯಕ್ಷೆ ಡಾ.ಸುನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿನಯ್ ಕಬ್ಯಾಡಿ, ಗೋಪಾಲ್ ಬಂಗೇರ ಮುಂತಾದವರು ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!